Last Updated:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಭೇಟಿಯಾಗಲು ಕುಟುಂಬಸ್ಥರು ಹಾಗೂ ಆಪ್ತರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಭೇಟಿಯಾಗಲು ಕುಟುಂಬಸ್ಥರು ಹಾಗೂ ಆಪ್ತರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸುತ್ತಿದ್ದಾರೆ. ಈ ನಡುವೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi) ಹಾಗೂ ತಾಯಿ ಮೀನಾ (Meena) ಅವರು ಜೈಲಿಗೆ ಭೇಟಿ ನೀಡಿರುವುದು ಗಮನ ಸೆಳೆದಿದೆ. ಮಗನ ಯೋಗಕ್ಷೇಮ ವಿಚಾರಿಸಲು ತಾಯಿ ಮೀನಾ ಆಗಮಿಸಿದ್ದರೆ, ಪತ್ನಿ ವಿಜಯಲಕ್ಷ್ಮೀ ಕೂಡ ದರ್ಶನ್ ಭೇಟಿಯಾಗಲು ಜೈಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಇವರಿಬ್ಬರ ಭೇಟಿ ನಡುವೆ ನಟ ಧನ್ವೀರ್ (Dhanveer) ಕೂಡ ದರ್ಶನ್ ಭೇಟಿಗೆ ಆಗಮಿಸಿರೋದು ಕುತೂಹಲ ಮೂಡಿಸಿದೆ.














