Last Updated:
ನಾಲ್ಕು ದಿನಗಳಲ್ಲಿ 108 ಪುಟಗಳ 175 ಪ್ಯಾರಾಗಳಷ್ಟು ಸಾಕ್ಷ್ಯ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ದರ್ಶನ್ ಸಲ್ಲಿಸಿದ್ದ ಎರಡು ಅರ್ಜಿಗಳನ್ನು 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ (Renukaswamy Case) ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ಪ್ರದೋಶ್ (Pradosh) ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಸಾಕ್ಷ್ಯ ನೀಡುತ್ತಿದ್ದು, ನಾಲ್ಕು ದಿನಗಳಲ್ಲಿ 108 ಪುಟಗಳ 175 ಪ್ಯಾರಾಗಳಷ್ಟು ಸಾಕ್ಷ್ಯ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ದರ್ಶನ್ ಸಲ್ಲಿಸಿದ್ದ ಎರಡು ಅರ್ಜಿಗಳನ್ನು 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರದೋಶ್ ನ ನ್ಯಾಯಾಲಯಕ್ಕೆ ಕರೆತರುವಾಗ ಯಾರೊಂದಿಗೂ ಮಾತನಾಡಲು ಅವಕಾಶ ನೀಡಬಾರದು ಎಂದು ಕೋರಿ ದರ್ಶನ್ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 267 ಹಾಗೂ ಬಿಎನ್ಎಸ್ಎಸ್ ಸೆಕ್ಷನ್ 302 ಅಡಿಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು.
ಮಾಫಿ ಸಾಕ್ಷಿಯ ಹೇಳಿಕೆ ದಾಖಲಿಸುವ ವೇಳೆ ಹಿಂದಿನ ದಿನ ಮರೆತುಹೋದ ವಿಚಾರವನ್ನು ಮರುದಿನ ಸೇರಿಸಲು ಅವಕಾಶ ನೀಡಬಾರದು ಎಂದು ಕೋರಿ ಮತ್ತೊಂದು ಅರ್ಜಿ ಸಲ್ಲಿಸಲಾಗಿತ್ತು. ಎರಡೂ ಅರ್ಜಿಗಳ ಕುರಿತು ವಾದ-ಪ್ರತಿವಾದ ಆಲಿಸಿದ 59ನೇ ಸಿಸಿಹೆಚ್ ನ್ಯಾಯಾಲಯ, ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ.
ವರದಿ- ಮಂಜುನಾಥ್, ಪ್ರತಿನಿಧಿ, ನ್ಯೂಸ್ 18 ಕನ್ನಡ, ಬೆಂಗಳೂರು














