Darshan: ರೇಣುಕಾಸ್ವಾಮಿ ಕೇಸ್‌ನಲ್ಲಿ ಮತ್ತಿಬ್ಬರು ನಟರಿಗೆ ಕೋರ್ಟ್ ನೋಟಿಸ್! ದರ್ಶನ್ ಆಪ್ತರ ಖುದ್ದು ಹಾಜರಿಗೆ ಸೂಚನೆ | | ACTPnews

News18


Last Updated:

ಈಗಾಗಲೇ ನ್ಯಾಯಾಲಯದಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಟರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

News18
News18

ರೇಣುಕಾಸ್ವಾಮಿ ಕೊ* ಪ್ರಕರಣದ (Renukaswamy Case) ವಿಚಾರಣೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದಲ್ಲಿ ಮುಂದುವರಿದಿದೆ. ಪ್ರಕರಣದಲ್ಲಿ ಆರೋಪಿ ಆಗಿದ್ದ ಪ್ರದೋಷ್ ಮಾಫಿ ಸಾಕ್ಷಿಯಾಗಿದ್ದು, ಈಗಾಗಲೇ ನ್ಯಾಯಾಲಯದಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ನಟರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಚಿಕ್ಕಣ್ಣ, ಯಶಸ್ ಸೂರ್ಯಗೆ ಸಮನ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿಗಳಾಗಿರುವ ನಟರಾದ ಚಿಕ್ಕಣ್ಣ ಮತ್ತು ಯಶಸ್ ಸೂರ್ಯ ಗೆ 59ನೇ ಸಿಸಿಎಚ್ ನ್ಯಾಯಾಲಯ ಸಮನ್ಸ್ ನೀಡಿದೆ. ಇಬ್ಬರೂ ಅಕ್ಟೋಬರ್ 13ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ದಾಖಲಿಸಬೇಕಾಗಿದೆ.

ಪ್ರಕರಣದಲ್ಲಿ ಚಿಕ್ಕಣ್ಣನ CW-80 ಹಾಗೂ ಯಶಸ್ ಸೂರ್ಯ ನ CW-98 ಸಾಕ್ಷಿಯಾಗಿ ಗುರುತಿಸಲಾಗಿದೆ. ಹೀಗಾಗಿ ಇಬ್ಬರು ನಟರಿಗೂ ನ್ಯಾಯಾಲಯದಿಂದ ಅಧಿಕೃತವಾಗಿ ಸಮನ್ಸ್ ಜಾರಿಯಾಗಿದೆ.

ಸ್ಟೋನಿ ಬ್ರೂಕ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟರು

ರೇಣುಕಾಸ್ವಾಮಿ ಕೊಲೆಗೂ ಮುನ್ನ ಆರೋಪಿ ದರ್ಶನ್ ಭಾಗಿಯಾಗಿದ್ದ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಮತ್ತು ಯಶಸ್ ಸೂರ್ಯ ಕೂಡ ಭಾಗಿಯಾಗಿದ್ದರು ಎಂಬುದು ಪ್ರಕರಣದ ತನಿಖೆಯಲ್ಲಿ ಪ್ರಮುಖ ಅಂಶವಾಗಿದೆ.

ಬೆಂಗಳೂರಿನ ಸ್ಟೋನಿ ಬ್ರೂಕ್‌ನಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಇಬ್ಬರೂ ಭಾಗಿಯಾಗಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಾಕ್ಷಿಗಳಾಗಿ ಸಮನ್ಸ್ ನೀಡಲಾಗಿದೆ. ಪಾರ್ಟಿಯಲ್ಲಿ ನಡೆದ ಘಟನೆಗಳು ಹಾಗೂ ಅಲ್ಲಿ ಹಾಜರಿದ್ದವರ ಕುರಿತು ಇಬ್ಬರಿಂದಲೂ ನ್ಯಾಯಾಲಯ ಮಾಹಿತಿ ಪಡೆಯುವ ಸಾಧ್ಯತೆಯಿದೆ.

ವರದಿ- ಮಾದೇಶ್, ಪ್ರತಿನಿಧಿ, ನ್ಯೂಸ್ 18 ಕನ್ನಡ, ಬೆಂಗಳೂರು



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports