[ad_1]
Last Updated:
ಇಂದು 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಮಾಫಿ ಸಾಕ್ಷಿ ಅರ್ಜಿಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿತ್ತು. ಪ್ರದೂಷ್ ಮತ್ತು ವಿನಯ್ ಸಲ್ಲಿಸಿರುವ ಅರ್ಜಿಗಳ ಕುರಿತು ವಿಚಾರಣೆ ನಡೆದು ಆದೇಶ ಹೊರಬೀಳುವ ಸಾಧ್ಯತೆ ಇತ್ತು. ಆದರೆ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಲಾಗಿದ್ದು, ಪ್ರಕರಣದಲ್ಲಿ ಮತ್ತೊಂದು ಮಹತ್ವದ ದಿನಾಂಕ ನಿಗದಿಯಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ಪ್ರದೂಷ್ (Pradush) ಹಾಗೂ ವಿನಯ್ (Vinay) ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಇಂದು ನಡೆಯಬೇಕಿತ್ತು. ಈ ಹಿನ್ನೆಲೆಯಲ್ಲಿ 59ನೇ ಸಿಸಿಹೆಚ್ ನ್ಯಾಯಾಲಯದ ವಿಚಾರಣೆಯತ್ತ ಎಲ್ಲರ ಗಮನ ನೆಟ್ಟಿತ್ತು. ಆದರೆ ಕೆಲವು ಕಾರಣಗಳಿಂದ ಮಾಫಿ ಸಾಕ್ಷಿ ಹೇಳಿಕೆ ಕುರಿತ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 24ಕ್ಕೆ ಮುಂದೂಡಿದೆ.
[ad_2]
Source link














