Last Updated:
ಅರ್ಜಿಯ ವಿಚಾರಣೆ ನಡೆಸಿರುವ 59ನೇ ಸಿಸಿಹೆಚ್ ನ್ಯಾಯಾಲಯ, ಪ್ರದೂಷ್ನ ಅಪರಾಧ ಹಿನ್ನೆಲೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ತನಿಖಾಧಿಕಾರಿಯಿಂದ ವರದಿ ಕೇಳಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Case) ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಆರೋಪಿಯಾಗಿರುವ ಪ್ರದೂಷ್, (Pradush) ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಇದೀಗ ನ್ಯಾಯಾಲಯದ ಗಮನ ಸೆಳೆದಿದೆ. ಈ ಅರ್ಜಿಯ ವಿಚಾರಣೆ ನಡೆಸಿರುವ 59ನೇ ಸಿಸಿಹೆಚ್ ನ್ಯಾಯಾಲಯ, ಪ್ರದೂಷ್ನ ಅಪರಾಧ ಹಿನ್ನೆಲೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ತನಿಖಾಧಿಕಾರಿಯಿಂದ ವರದಿ ಕೇಳಿದೆ.














