Last Updated:
Darshan: ಪ್ರದೋಷ್ ಹೇಳಿಕೆ ದಾಖಲಿಸಲು ದಿನಾಂಕ ನಿಗದಿಯಾದ ಬೆನ್ನಲ್ಲಿಯೇ ದರ್ಶನ್ ಲಾಯರ್ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಅನಿರೀಕ್ಷಿತ ಟ್ವಿಸ್ಟ್ ಕೊಡೋಕೆ ರೆಡಿಯಾಗಿದ್ದಾರೆ.
ರೇಣುಕಾಸ್ವಾಮಿ ಕೇಸ್ನಲ್ಲಿ (Renukaswamy Case) ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಲು ದಿನಾಂಕ ನಿಗದಿಯಾಗಿದ್ದ ಬೆನ್ನಲ್ಲೇ ದರ್ಶನ್ (Darshan) ಲಾಯರ್ ಲಾಸ್ಟ್ ಮೊಮೆಂಟ್ ಟ್ವಿಸ್ಟ್ ಕೊಟ್ಟಿದ್ದಾರೆ. ಇನ್ನೇನು ಹೇಳಿಕೆ ದಾಖಲಿಸಲು ಒಂದೇ ದಿನ ಬಾಕಿ ಇರುವಾಗ ದರ್ಶನ್ ಲಾಯರ್ ಹೊಸ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರದೋಷ್ ಮಾಫಿ ಸಾಕ್ಷಿ ಒಂದು ವಾರ ಮುಂದೂಡಿಕೆ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. 59 ನೇ ಸೇಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ದರ್ಶನ ಪರ ವಕೀಲರಿಂದ ಅರ್ಜಿ ಸಲ್ಲಿಕೆಯಾಗಿದೆ.
ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ಮಾಡಬೇಕು. ಹೀಗಾಗಿ ಮಾಫಿ ಸಾಕ್ಷಿ ಹೇಳಿಕೆ ದಾಖಲು ಒಂದು ವಾರ ಮುಂದೂಡುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ ಮಾಡಬೇಕು ಎಂದು 59 ನೇ ಸಿಸಿಹೆಚ್ ಕೋರ್ಟ್ ಅರ್ಜಿ ಸಲ್ಲಿಕೆ ಮಾಡಿದ್ದು ಮಧ್ಯಾಹ್ನ 2:45 ಕ್ಕೆ ಅರ್ಜಿ ವಿಚಾರಣೆ ಮಾಡುವುದಾಗಿ ಕೋರ್ಟ್ ತಿಳಿಸಿದೆ.
ಪ್ರಕರಣದ ಆರೋಪಿ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಿ ವಿಚಾರಣೆಗೆ ಸಹಕರಿಸಲು ಮುಂದಾಗಿರುವುದು ಈಗಾಗಲೇ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿರುವುದು ಪ್ರಕರಣದ ಮುಂದಿನ ಹಂತದ ಬಗ್ಗೆ ಗಮನ ಸೆಳೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸಂಖ್ಯೆ 14 ಆಗಿರುವ ಪ್ರದೋಷ್ ಎಸ್. ರಾವ್ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರ ಈಗಾಗಲೇ ನ್ಯಾಯಾಲಯದ ಹಂತ ತಲುಪಿತ್ತು.
ಸೆಷನ್ಸ್ ಕೋರ್ಟ್ ಪ್ರದೋಷ್ ನ ಮಾಫಿ ಅರ್ಜಿಯನ್ನು ಅಂಗೀಕರಿಸಿ ಅಭಿಯೋಜನೆಯ ಸಾಕ್ಷಿಯಾಗಿ ಪರಿಗಣಿಸಿದೆ. ಇದೀಗ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿಯಾಗಿರುವುದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.
ಆದರೆ ಇಷ್ಟೆಲ್ಲ ಬೆಳವಣಿಗೆ ಆದರೂ ಈಗ ದರ್ಶನ್ ಲಾಯರ್ ಅರ್ಜಿ ಸಲ್ಲಿಸಿರುವ ಕಾರಣ ಪ್ರದೋಷ್ ಹೇಳಿಕೆ ದಾಖಲು ಮತ್ತೆ ಮುಂದೂಡಬಹುದಾ ಎನ್ನುವ ಸಾಧ್ಯತೆ ಹೆಚ್ಚಾಗಿದೆ.
ಪ್ರದೋಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರವನ್ನು ಪ್ರಶ್ನಿಸಿ ದರ್ಶನ್ ಪರವಾಗಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 23ರಂದು ವಜಾಗೊಳಿಸಿದೆ. ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಕಾನೂನುಬಾಹಿರತೆ ಕಂಡುಬಂದಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಸೆಪ್ಟೆಂಬರ್ 28ರಂದು ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ ಎಂಬ ಬೆಳವಣಿಗೆ ಪ್ರಕರಣದಲ್ಲಿ ಕುತೂಹಲ ಮೂಡಿಸಿದೆ. ಪ್ರದೋಷ್ ನ್ಯಾಯಾಲಯದ ಮುಂದೆ ಯಾವ ರೀತಿಯ ಹೇಳಿಕೆ ನೀಡುತ್ತಾರೆ. ಅದನ್ನು ವಿಚಾರಣೆಯಲ್ಲಿ ಹೇಗೆ ಪರಿಗಣಿಸಲಾಗುತ್ತದೆ ಮತ್ತು ನಂತರ ದರ್ಶನ್ ಪರ ವಕೀಲರು ಯಾವ ರೀತಿಯ ಪ್ರತಿಪ್ರಶ್ನೆ ನಡೆಸುತ್ತಾರೆ ಎನ್ನುವ ಕುತೂಹಲ ಇತ್ತು.
ವರದಿ: ಮಂಜುನಾಥ್ ಎನ್. ನ್ಯೂಸ್18 ಕನ್ನಡ ಪ್ರತಿನಿಧಿ ಬೆಂಗಳೂರು














