Last Updated:
ದರ್ಶನ್ ಭೇಟಿಯಾಗಲು ಧನ್ವೀರ್ ತಮ್ಮ ಸ್ನೇಹಿತರೊಂದಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ಜೈಲಿನತ್ತ ಧನ್ವೀರ್ ತೆರಳುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan) ಭೇಟಿಯಾಗಲು ಆಪ್ತರು ಹಾಗೂ ಕುಟುಂಬಸ್ಥರು ಆಗಾಗ್ಗೆ ಪರಪ್ಪನ ಅಗ್ರಹಾರ ಜೈಲಿಗೆ ತೆರಳುತ್ತಿದ್ದಾರೆ. ಈ ನಡುವೆ ದರ್ಶನ್ ಆಪ್ತನಾಗಿರುವ ನಟ ಧನ್ವೀರ್ ಕೂಡ ಜೈಲಿಗೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿತ್ತು. ಇತ್ತೀಚೆಗೆ ದರ್ಶನ್ ಹಾಗೂ ಧನ್ವೀರ್ ನಡುವೆ ಅಂತರ ಮೂಡಿದೆ ಎಂಬ ರೀತಿಯ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ ಇದೀಗ ಸ್ವತಃ ಧನ್ವೀರ್ ಈ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ.














