Last Updated:
ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ14 ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದು, ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲಿದ್ದಾರೆ. ಇದು ಪ್ರಕರಣದ ವಿಚಾರಣೆಯಲ್ಲಿ ಮಹತ್ವ ಪಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ಗೆ (Darshan) ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ ಎ14 ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ, ಇದೀಗ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶಗಳನ್ನೇ ನ್ಯಾಯಾಲಯದ ಮುಂದೆ ಹೇಳಿಕೆ ರೂಪದಲ್ಲಿ ದಾಖಲಿಸಲು ಸಿದ್ಧರಾಗಿದ್ದಾರೆ. ಈ ಬೆಳವಣಿಗೆ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಮಹತ್ವ ಪಡೆದುಕೊಂಡಿದೆ.














