Last Updated:
Darshan: ವಿಜಯಲಕ್ಷ್ಮಿ ದರ್ಶನ್ ಅವರು ಗಂಡನ ಜೊತೆಗಿನ ಫೋಟೋ ಶೇರ್ ಮಾಡಿದ್ದಾರೆ. ಅದರೊಂದಿಗೆ ಅವರು ಮಾರ್ಮಿಕವಾದ ಒಂದು ಬರಹವನ್ನೂ ಬರೆದಿದ್ದಾರೆ.
ವಿಜಯಲಕ್ಷ್ಮಿ ದರ್ಶನ್ ಅವರು ಗಂಡನೊಂದಿಗಿನ ಫೋಟೋವನ್ನು ಇನ್ಸ್ಟಾಗ್ರಾಮ್ ಸ್ಟೋರಿ ಹಾಕಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ವಿಜಯಲಕ್ಷ್ಮಿ ಅವರು ಆಗಾಗ ಫೋಟೋ, ವಿಡಿಯೋ ಶೇರ್ ಮಾಡುತ್ತಲೇ ಇರುತ್ತಾರೆ. ಇದೀಗ ವಿಜಯಲಕ್ಷ್ಮಿ ಅವರು ದರ್ಶನ್ ಜೊತೆಗಿರುವ ಫೋಟೋ ಪೋಸ್ಟ್ ಮಾಡಿದ್ದು ಅದರಲ್ಲಿ ಒಂದು ಬರಹವನ್ನು ಬರೆದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರ ಬಗ್ಗೆ ಆಗಾಗ ಅವರ ಪತ್ನಿ ಪೋಸ್ಟ್ ಹಾಕುತ್ತಿರುತ್ತಾರೆ. ಇದೀಗ ಸ್ಟೋರಿಯಲ್ಲಿ ಅವರು ಫೋಟೋ ಹಾಕಿದ್ದಾರೆ.
ದರ್ಶನ್ ಜೊತೆಗಿನ ಎಐ ಫೋಟೋ ಶೇರ್ ಮಾಡಿದ ವಿಜಯಲಕ್ಷ್ಮಿ ಅವರು ಸುಂದರವಾದ ಕ್ಯಾಪ್ಶನ್ ಬರೆದಿದ್ದಾರೆ. ನಗುತಿರುವ ಮುಖದ ಹಿಂದಿನ ನೋವು ಭಗವಂತನಿಗೆ ಮಾತ್ರ ಗೊತ್ತು ಎಂದು ವಿಜಯಲಕ್ಷ್ಮಿ ಅವರು ಬರೆದುಕೊಂಡಿದ್ದಾರೆ.
Bangalore,Karnataka














