Last Updated:
ಇದೀಗ ನಟ ದರ್ಶನ್ ನ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಳೆ ನಡೆಯಲಿರುವ ಸಾಕ್ಷಿಯ ಪಾಟೀ ಸವಾಲಿಗೆ ಮುನ್ನ ದರ್ಶನ್ ರಿಂದ ಕೆಲವು ಮಾಹಿತಿ ಪಡೆಯಬೇಕಿರುವ ಹಿನ್ನೆಲೆಯಲ್ಲಿ ನಟ ಖುದ್ದಾಗಿ ಹಾಜರಾಗಬೇಕಿದೆ ಎಂದು ವಕೀಲರು ಮನವಿ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ವಿಚಾರಣೆ ಇದೀಗ ಮತ್ತೊಂದು ಮಹತ್ವದ ಹಂತ ತಲುಪಿದೆ. ಪ್ರಕರಣದ ಆರೋಪಿ 14 ಆಗಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದೆ. ಈ ಅರ್ಜಿಯ ಕುರಿತು ನ್ಯಾಯಾಲಯ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗುವ ಸಾಧ್ಯತೆಯಿದೆ. ಈ ಮಧ್ಯೆ ಇದೀಗ ಇದೀಗ ನಾಳಿನ (ಆಗಸ್ಟ್ 12) ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಕೋರಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.














