Last Updated:
ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೂ ಅವರ ಅಭಿಮಾನಿಗಳ ಬೆಂಬಲ ಮಾತ್ರ ಕಡಿಮೆಯಾಗಿಲ್ಲ. ಹೀಗಿರುವಾಗ ನಟ ದರ್ಶನ್ ಹಳೆಯ ವಿಡಿಯೋ (Old Video) ಒಂದು ಮತ್ತೆ ವೈರಲ್ ಆಗ್ತಿದೆ.
ಕನ್ನಡ ಚಿತ್ರರಂಗದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಹಿನ್ನೆಲೆಯಲ್ಲಿ ಸುದ್ದಿಯಲ್ಲಿದ್ದಾರೆ. ಪ್ರಕರಣದಲ್ಲಿ ಎ2 ಆರೋಪಿಯಾಗಿ ಹೆಸರು ಕೇಳಿಬಂದ ಬಳಿಕ ದರ್ಶನ್ ಜೈಲು ಸೇರಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೂ ಅವರ ಅಭಿಮಾನಿಗಳ ಬೆಂಬಲ ಮಾತ್ರ ಕಡಿಮೆಯಾಗಿಲ್ಲ. ಹೀಗಿರುವಾಗ ನಟ ದರ್ಶನ್ ಹಳೆಯ ವಿಡಿಯೋ (Old Video) ಒಂದು ಮತ್ತೆ ವೈರಲ್ ಆಗ್ತಿದೆ.
ದರ್ಶನ್ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ನಟರಲ್ಲಿ ಒಬ್ಬರು. ಅವರ ಸಿನಿಮಾ ಬಿಡುಗಡೆಯಾದಾಗ ಚಿತ್ರಮಂದಿರಗಳ ಮುಂದೆ ಕಾಣುವ ಸಂಭ್ರಮವೇ ಇದಕ್ಕೆ ಸಾಕ್ಷಿ. ಸದ್ಯ ಅವರು ಜೈಲಿನಲ್ಲಿದ್ದರೂ ಹೊರಗಿರುವ ಅಭಿಮಾನಿಗಳ ಪ್ರೀತಿ ಮತ್ತು ಅಭಿಮಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ . ಸಾಮಾಜಿಕ ಜಾಲತಾಣಗಳಲ್ಲಿ ದಿನನಿತ್ಯ ದರ್ಶನ್ ಕುರಿತ ಪೋಸ್ಟ್‌ಗಳು, ಫೋಟೋಗಳು ಹಾಗೂ ಹಳೆಯ ವಿಡಿಯೋಗಳು ವೈರಲ್ ಆಗುತ್ತಲೇ ಇವೆ.
ಅನೇಕ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಶೀಘ್ರದಲ್ಲೇ ಮತ್ತೆ ಚಿತ್ರರಂಗಕ್ಕೆ ಮರಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. “ನಮ್ಮ ಬಾಸ್ ಎಲ್ಲಿದ್ದರೂ ಬಾಸೇ” ಎಂಬ ಮಾತನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ.
ದರ್ಶನ್ ಅವರ ಹಳೆಯ ವಿಡಿಯೋವೊಂದು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗದಿದ್ದರೂ, ಅಭಿಮಾನಿಗಳು ಅದನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ವೈರಲ್ ವಿಡಿಯೋ ನೋಡಿದ ಅನೇಕ ಅಭಿಮಾನಿಗಳು ಎಮೋಷನಲ್ ಆಗಿದ್ದಾರೆ . ಕೆಲವರು ತಮ್ಮ ನೆಚ್ಚಿನ ನಟನನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳುತ್ತಿದ್ದರೆ, ಮತ್ತಷ್ಟು ಜನ ದರ್ಶನ್ ಶೀಘ್ರದಲ್ಲೇ ಅಭಿಮಾನಿಗಳ ಮುಂದೆ ಬರಲಿ ಎಂದು ಹಾರೈಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳು ಹಳೆಯ ನೆನಪುಗಳನ್ನು ನೆನಪಿಸಿಕೊಳ್ಳುತಿದ್ದಾರೆ.
ಜೊತೆಗೆ ನಟ ದರ್ಶನ್ ಗೆ ಅಪಾರ ಹೆಸರು ತಂದು ಕೊಟ್ಟ ಕಲಾಸಿಪಾಳ್ಯ ಸಿನಿಮಾ ಮತ್ತೆ ತೆರೆ ಮೇಲೆ ಬರಲಿದೆ ಎಂಬ ಮಾತು ಕೂಡಾ ಕೇಳಿಬರುತ್ತಿದೆ. ಇದೇ ರೀತಿಯ ಪರಿಸ್ಥಿತಿಯಲ್ಲಿ 2011ರಲ್ಲಿ ತೆರೆಕಂಡ ಸಾರಥಿ ಚಿತ್ರ, ದರ್ಶನ್ ಜೈಲಿನಲ್ಲಿದ್ದಾಗಲೇ ರಿಲೀಸ್ ಆಗಿ ಬಹಳಷ್ಟು ಯಶಸ್ಸನ್ನು ಕಂಡಿತ್ತು.ಇದೀಗ ಮತ್ತೆ ಅದೇ ರೀತಿಯ ಘಟನೆ ಮರುಕಳಿಸುತ್ತಾ ಎಂಬುದನ್ನು ನೋಡಬೇಕಿದೆ.
Bangalore [Bangalore],Bangalore,Karnataka













