Day Against Drug Abuse 2023: ಡ್ರಗ್ಸ್ ವಿರೋಧಿ ಜಾಗೃತಿ ಜಾಥಾದಲ್ಲಿ ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಡಿ.ಸಿ.ಎಂ. ಡಿಕೆಶಿ | Day Against Drug Abuse 2023: DK Shivakumar participated in Awareness against drugs jatha

Bengaluru

oi-Madhusudhan KR

By ಒನ್‌ ಇಂಡಿಯಾ ಪ್ರತಿನಿಧಿ

|

Google Oneindia Kannada News

ಬೆಂಗಳೂರು, ಜೂನ್‌, 26: ಇತ್ತೀಚಿನ ದಿನಗಳಲ್ಲಿ ಡ್ರಗ್ಸ್‌ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರಿಗಿಂತಲೂ ಯುವತಿಯರೇ ಹೆಚ್ಚಾಗಿ ಡ್ರಗ್ಸ್‌ ಸೇವನೆ ಮಾಡಿರುವ ಪ್ರಕರಣಗಳು ದಾಖಲಾಗುತ್ತಲೇ ಇವೆ. ಆದ್ದರಿಂದ ಇದಕ್ಕೆಲ್ಲ ನಾಂದಿಯಾಡುವ ಉದ್ದೇಶದಿಂದ ಇಂದು ದೇಶಾದ್ಯಂತ ಡ್ರಗ್ಸ್ ವಿರೋಧಿ ಜಾಗೃತಿ ಜಾಥಾಗಳನ್ನು ಹಮ್ಮಿಕೊಂಡಿದ್ದಾರೆ. ಹಾಗೆಯೇ ಬೆಂಗಳೂರಿನಲ್ಲಿ ನಡೆದ ಜಾಥಾದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಶಾಲಾ, ಕಾಲೇಜು ಮಕ್ಕಳ ಜೊತೆ ಹೆಜ್ಜೆ ಹಾಕುವ ಮೂಲಕ ಜಾಗೃತಿ ಮೂಡಿಸಿದರು.

ಡ್ರಗ್ಸ್, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗಿದೆ. ಇದರಿಂದ ನಮ್ಮ ಸಮಾಜವನ್ನು ರಕ್ಷಿಸುವ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು.

Day Against Drug Abuse 2023: DK Shivakumar participated in Awareness against drugs jatha

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವ ವಿಚಾರಗಳನ್ನು ತೆರೆದಿಟ್ಟರು. ಹಾಗೆಯೇ ಇದೇ ವೇಳೆ ಡ್ರಗ್ಸ್ ವಿರುದ್ಧ ಹೋರಾಡಲು ಮಕ್ಕಳಿಗೆ ಉತ್ತೇಜನ ತುಂಬಿದರು.

ವಂಚನೆ ಆರೋಪ ಸಂಬಂಧ ಬೆಂಗಳೂರು-ದಾವಣಗೆರೆಯ 7 ಕಡೆ ED ದಾಳಿವಂಚನೆ ಆರೋಪ ಸಂಬಂಧ ಬೆಂಗಳೂರು-ದಾವಣಗೆರೆಯ 7 ಕಡೆ ED ದಾಳಿ

ಮಾದಕ ವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕ ಆಗಲಿದೆ. ಹೀಗಾಗಿ ಇದನ್ನು ಕೊನೆಗೊಳಿಸಲು ನಾವೆಲ್ಲರೂ ಮಕ್ಕಳು, ಯುವಕರಲ್ಲಿ ಜಾಗೃತಿ ಮೂಡಿಸುವ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಮಕ್ಕಳು, ಯುವಕರು ಈ ದೇಶದ ಆಸ್ತಿ. ಅವರು ನಮ್ಮ ಸಂಸ್ಕೃತಿ ಉಳಿಸಿಕೊಂಡು, ವಿದ್ಯಾವಂತರಾಗಿ ವಿಶ್ವ ಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಂದು ಬೆಂಗಳೂರು, ರಾಜ್ಯ ಹಾಗೂ ದೇಶಕ್ಕೆ ವಿಶ್ವಮಟ್ಟದಲ್ಲಿ ಒಳ್ಳೆಯ ಹೆಸರು ಬಂದಿದೆ ಎಂದರು.

ಇಲ್ಲಿರುವ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ಡಿ.ಕೆ.ಶಿವಕುಮಾರ್ ಕೂಡ ಆಗಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಲು ಡ್ರಗ್ಸ್ ವ್ಯಸನದಂತಹ ದುಶ್ಚಟಗಳಿಂದ ದೂರ ಉಳಿಯಬೇಕು. ಆಗ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ. ಇಂದು ನಾನು ನಿಮ್ಮ ಜೊತೆ ಜಾಥಾದಲ್ಲಿ ಹೆಜ್ಜೆ ಹಾಕುತ್ತೇನೆ. ಈ ಜಾಥಾ ನಿಮ್ಮ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯಲಿದೆ ಎಂದರು.

ನೀವೆಲ್ಲರೂ ಇಂದು ಇತ್ತ ವಿಧಾನಸೌಧ ಅಂದರೆ ಶಾಸಕಾಂಗ ಹಾಗೂ ಅತ್ತ ಹೈಕೋರ್ಟ್ ಅಂದರೆ ನ್ಯಾಯಾಂಗದ ಮುಂದೆ ಇದ್ದೀರಿ. ಇಡೀ ವಿಶ್ವದಲ್ಲೇ ಎಲ್ಲೂ ಶಾಸಕಾಂಗ ಹಾಗೂ ನ್ಯಾಯಾಂಗ ಎದುರುಬದುರು ಇಲ್ಲ. ಮುಂದೆ ಅಪ್ಪಿತಪ್ಪಿ ನಿಮ್ಮ ಸ್ನೇಹಿತರು ಅಥವಾ ಪರಿಚಯದವರಲ್ಲಿ ಯಾರಾದರೂ ಡ್ರಗ್ಸ್ ವ್ಯಸನಿಗಳಾದರೆ ಪೊಲೀಸರು ಬಂಧಿಸುತ್ತಾರೆ ಮತ್ತು ನ್ಯಾಯಾಲಯದಲ್ಲಿ ಶಿಕ್ಷೆ ಆಗಲಿದೆ ಎಂಬ ಸಂದೇಶ ನಿಮ್ಮ ಅರಿವಾಗಲಿ ಎಂದು ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ ಎಂದರು.

ಕಳೆದೆರಡು ವರ್ಷಗಳಲ್ಲಿ ಡ್ರಗ್ಸ್ ದಂಧೆಯಲ್ಲಿ ದೊಡ್ಡ, ದೊಡ್ಡವರು ಸಿಕ್ಕಿಬಿದ್ದು ಯಾವ ರೀತಿ ಸಂಕಷ್ಟಗಳನ್ನು ಅನುಭವಿಸಿದ್ದಾರೆ ಎಂದು ನೀವು ನೋಡಿದ್ದೀರಿ. ನಿಮ್ಮ ಜೀವನದಲ್ಲಿ ಇದಕ್ಕೆ ಅವಕಾಶ ಮಾಡಿಕೊಡಬೇಡಿ. ಡ್ರಗ್ಸ್ ಅನ್ನು ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಹೆಚ್ಚು ನಿಯಂತ್ರಣ ಮಾಡಲಾಗಿದೆ ಎಂದರು.

ಇನ್ನು ಕಳೆದ ಮೂರು ವರ್ಷಗಳಿಂದ ಅನೇಕ ಪಾದಯಾತ್ರೆಗಳಲ್ಲಿ ಪಾಲ್ಗೊಂಡಿದ್ದೇನೆ. ನೀರಿಗಾಗಿ ನಡಿಗೆ, ಸ್ವಾತಂತ್ರ್ಯ ನಡಿಗೆ, ಭಾರತ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದೇವೆ. ಇದೀಗ ಮತ್ತೆ ಡ್ರಗ್ಸ್‌ನಿಂದ ಆಗುವ ಸಮಸ್ಯೆಗಳ ಬಗ್ಗೆ ನಿಮಗೆ ಜಾಗೃತಿ ಮೂಡಿಸಲು ಇಂದು ನಿಮ್ಮ ಜೊತೆ ಹೆಜ್ಜೆ ಹಾಕಿದ್ದೇನೆ. ಡ್ರಗ್ಸ್ ಸೇವನೆ ಮಾಡಿದರೆ ಸಾವು, ನೋವು ಎರಡೂ ಬರುತ್ತದೆ. ಹೀಗಾಗಿ ಇದರ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದರು. ಅಲ್ಲದೆ ನೀವು ನಿಮ್ಮ ಸ್ನೇಹಿತರು, ಆತ್ಮೀಯರು ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ, ನಿಮಗೆ ಅಭಿನಂದನೆಗಳು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

English summary

Day Against Drug Abuse 2023: DCM DK Shivakumar participated in Awareness against drugs jatha, Awareness against drugs jatha in Bengaluru.

Story first published: Monday, June 26, 2023, 14:04 [IST]

Source link