Last Updated:
ಡಿಸಿ ಚಿತ್ರದ ಯಶಸ್ಸಿನ ಬೆನ್ನಲ್ಲೇ ನಿರ್ಮಾಪಕರು ಚಿತ್ರತಂಡಕ್ಕೆ ಭರ್ಜರಿ ಉಡುಗೊರೆ ನೀಡಿದ್ದು, ಇದೀಗ ಈ ವಿಚಾರ ಕಾಲಿವುಡ್‌ನಲ್ಲಿ ಸದ್ದು ಮಾಡುತ್ತಿದೆ.
ಕಾಲಿವುಡ್‌ನಲ್ಲಿ ವಿಭಿನ್ನ ಕಥೆ, ವಿಶಿಷ್ಟ ಮೇಕಿಂಗ್ ಮೂಲಕ ಗಮನ ಸೆಳೆಯುವ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanagaraj) ಇದೀಗ ನಾಯಕ ನಟನಾಗಿಯೂ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ. ಲೋಕೇಶ್ ಕನಕರಾಜ್ ನಾಯಕನಾಗಿ ಕಾಣಿಸಿಕೊಂಡಿರುವ ಡಿಸಿ ಸಿನಿಮಾ (DC Movie) ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ನಿರ್ಮಾಪಕರು ಚಿತ್ರತಂಡಕ್ಕೆ ಭರ್ಜರಿ ಉಡುಗೊರೆ ನೀಡಿದ್ದು, ಇದೀಗ ಈ ವಿಚಾರ ಕಾಲಿವುಡ್‌ನಲ್ಲಿ ಸದ್ದು ಮಾಡುತ್ತಿದೆ.














