Last Updated:
ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಕಟ್ಟಡ ಕುಸಿದು ಭಾರೀ ದುರಂತ ಸಂಭವಿಸಿದೆ. ಈ ಕಟ್ಟಡದಲ್ಲಿ ಮಕ್ಕಳ ಹಾಸ್ಟೆಲ್ ಇದೆ ಎಂದು ವರದಿಯಾಗಿದೆ. ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ರಾಜಧಾನಿ ದೆಹಲಿಯ (Delhi) ಚಾಣಕ್ಯಪುರಿಯ ಸತ್ಯ ನಿಕೇತನ ಪ್ರದೇಶದಲ್ಲಿ ಇಂದು ಭಾನುವಾರ ಆರು ಅಂತಸ್ತಿನ ಕಟ್ಟಡ ಕುಸಿದು (Building Collapse) ದೊಡ್ಡ ದುರಂತ ಸಂಭವಿಸಿದೆ. ಈ ಘಟನೆಯಿಂದ ಸುತ್ತ ಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಆರಂಭಿಕ ವರದಿಗಳ ಪ್ರಕಾರ, ಕುಸಿದ ಕಟ್ಟಡ ಮಕ್ಕಳ ಹಾಸ್ಟೆಲ್ ಆಗಿತ್ತು ಎನ್ನಲಾಗಿದೆ. ಈವರೆಗೂ ನಾಲ್ಕು ಮಂದಿ ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಅನೇಕ ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.














