Last Updated:
ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ನಡೆದ ಸಭೆಯಲ್ಲಿ ಸಿಜೆಪಿ ಪರವಾಗಿ ವಕ್ತಾರ ಸೌರಬ್ ದಾಸ್, ಆಷುತೋಷ್ ರಂಕಾ ಭಾಗಿಯಾಗಿದ್ದರು, ಇನ್ನು ಕೇಂದ್ರದ ಸರ್ಕಾರದ ಪರವಾಗಿ ಸಚಿವರಾದ ಜೆಪಿ ನಡ್ಡಾ, ಜಿತೇಂದ್ರ ಸಿಂಗ್ ಭಾಗಿಯಾಗಿ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಕಳೆದೊಂದು ತಿಂಗಳಿಂದಲೂ ನಡೆಯುತ್ತಿರುವ ಕಾಕ್ರೋಚ್ ಜನತಾ ಪಕ್ಷದ (Cockroach Janata Party) ಹೋರಾಟ ನಡೆಯುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ಆಗ್ರಹಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ (Sonam Wangchuk) ಗುರುವಾರ ಮಧ್ಯರಾತ್ರಿಯ ನಂತರ ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಕೊನೆಗೊಳಿಸಿದರು. ಇದೀಗ ಕೇಂದ್ರ ಸರ್ಕಾರ 2ನೇ ಬಾರಿ ಸಿಜೆಪಿ ಜೊತೆ ಮಹತ್ವದ ಸಭೆ ನಡೆಸಿದೆ.
ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ನಡೆದ ಸಭೆಯಲ್ಲಿ ಸಿಜೆಪಿ ಪರವಾಗಿ ವಕ್ತಾರ ಸೌರಭ್ ದಾಸ್, ಆಶುತೋಷ್ ರಂಕಾ ಭಾಗಿಯಾಗಿದ್ದಾರೆ. ಇನ್ನು ಕೇಂದ್ರದ ಸರ್ಕಾರದ ಪರವಾಗಿ ಸಚಿವರಾದ ಜೆಪಿ ನಡ್ಡಾ, ಜಿತೇಂದ್ರ ಸಿಂಗ್ ಭಾಗಿಯಾಗಿ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಹಾಕಿರುವ ಕೇಸ್ ವಾಪಸ್, ಮೃತರ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ಕೊಡಬೇಕು, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸಿಜೆಪಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಕ್ಷ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಇಲ್ಲದೆ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರಿ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಸಿಜೆಪಿ ವಕ್ತಾರರಾದ ಸೌರಭ್ ದಾಸ್ ಮತ್ತು ಅಶುತೋಷ್ ರ್ಯಾಂಕ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕೇಂದ್ರ ಸರ್ಕಾರ ಶನಿವಾರ ಮಧ್ಯಾಹ್ನದವರೆಗೆ ಸಮಯ ಕೇಳಿದೆ ಎಂದು ಹೇಳಿದರು.
“ಪ್ರಶ್ನೆಪತ್ರಿಕೆ ಸೋರಿಕೆ ಘಟನೆ ಬೆಳಕಿಗೆ ಬಂದ ತಕ್ಷಣ, ಸರ್ಕಾರ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿತು. ನಾವು ಅಪರಾಧಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದೇವೆ. ನಾವು 22 ಲಕ್ಷ ಅಭ್ಯರ್ಥಿಗಳಿಗೆ ತಕ್ಷಣ ಪರೀಕ್ಷೆಯನ್ನು ಮರು ನಡೆಸಿದ್ದೇವೆ ಮತ್ತು ಫಲಿತಾಂಶಗಳನ್ನು ಘೋಷಿಸಿದ್ದೇವೆ. ಈ ಅಪರಾಧಿಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳು ಮತ್ತು ಕಠಿಣ ಶಿಕ್ಷೆಗಳನ್ನು ಖಚಿತಪಡಿಸಿಕೊಳ್ಳಲು ಕರಡು ಮಸೂದೆಯನ್ನು ಸಿದ್ಧಪಡಿಸುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದಿದ್ದಾರೆ.














