Last Updated:
ದೆಹಲಿಯಲ್ಲಿ ಕೇಂದ್ರ ಸಚಿವರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಕ್ರೋಚ್ ಪಾರ್ಟಿ ವಕ್ತಾರರು, ತಮ್ಮ 37 ದಿನಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.
ದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (Cockroach Janata Party) ತನ್ನ ಪ್ರತಿಭಟನೆಯನ್ನು ಅಂತ್ಯಗೊಳಿಸಲು ನಿರ್ಧರಿಸಿದೆ. ದೆಹಲಿಯಲ್ಲಿ (Delhi) ಕೇಂದ್ರ ಸಚಿವರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಕ್ರೋಚ್ ಪಾರ್ಟಿ ವಕ್ತಾರರು, ತಮ್ಮ 37 ದಿನಗಳ ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.
ಇನ್ನು, ಸಿಜೆಪಿ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಮನ್ನಣೆ ನೀಡಿದ್ದು, ಸಿಜೆಪಿ ಬೇಡಿಕೆಗಳನ್ನ ಪೂರೈಸಲು ಒಪ್ಪಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿಗಳ ಮೇಲೆ ಹಾಕಿರುವ ಕೇಸ್ ರದ್ದಿಗೆ ಒಪ್ಪಿಗೆ ಸೂಚಿಸಿರುವ ಕೇಂದ್ರ ಸರ್ಕಾರ ಎಫ್‌ಐಆರ್ ದಾಖಲಿಸಲ್ಲ ಅಂತ ಸ್ಪಷ್ಟಪಡಿಸಿದೆ. ಜೊತೆಗೆ ನಿಯಮಗಳನ್ನ ಪರಿಶೀಲಿಸಿ ಪರಿಹಾರ ಮೊತ್ತ ನಿಗದಿ ಮಾಡುವುದಾಗಿ ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಭರವಸೆ ನೀಡಿದ್ದು, ತಕ್ಷಣದಿಂದಲೇ ಜಂತರ್ ಮಂತರ್ ಪ್ರತಿಭಟನೆ ಅಂತ್ಯಗೊಳಿಸುವುದಾಗಿ ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ ಮಾಡಿದ್ದಾರೆ.














