Last Updated:
ಧ್ರುವ್ ವಿಕ್ರಮ್ ತಮ್ಮ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ಹೇಗೆ ಎದುರಿಸುತ್ತೀರಿ ಎಂಬ ಪ್ರಶ್ನೆ ಎದುರಾಯಿತು.
ಖ್ಯಾತ ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಹಾಗೂ ತಮಿಳು ನಟ ಧ್ರುವ್ ವಿಕ್ರಮ್ (Dhruv Vikram) ನಡುವಿನ ಸಂಬಂಧದ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಬೈಸನ್ ಕಾಲಮಾಡನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ಈ ಜೋಡಿ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ವದಂತಿಗಳ ನಡುವೆಯೇ, ಧ್ರುವ್ ವಿಕ್ರಮ್ ಮೊದಲ ಬಾರಿಗೆ ತಮ್ಮ ವೈಯಕ್ತಿಕ ಜೀವನದ ಬಗ್ಗೆ ನಡೆಯುತ್ತಿರುವ ಟೀಕೆ ಮತ್ತು ಚರ್ಚೆಗಳ ಕುರಿತು ಮೌನ ಮುರಿದಿದ್ದಾರೆ.














