Last Updated:
ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಧುರಂಧರ್ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಿದ ಬಳಿಕ ಇದೀಗ ಡಿಜಿಟಲ್ ವೇದಿಕೆಯಲ್ಲೂ ಹೊಸ ದಾಖಲೆ ಬರೆದಿದೆ.
ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಧುರಂಧರ್ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಿದ ಬಳಿಕ ಇದೀಗ ಡಿಜಿಟಲ್ ವೇದಿಕೆಯಲ್ಲೂ ಹೊಸ ದಾಖಲೆ ಬರೆದಿದೆ. ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಜಾಗತಿಕ ಮಟ್ಟದಲ್ಲಿ ಭಾರೀ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯುವ ಮೂಲಕ ಈ ವರ್ಷ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಇಂಗ್ಲಿಷೇತರ ಸಿನಿಮಾಗಳ ಪೈಕಿ ಮುಂಚೂಣಿಗೆ ಬಂದಿದೆ. ಭಾರತೀಯ ಸಿನಿಮಾಗಳಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಬೇಡಿಕೆಗೆ ಧುರಂಧರ್ ಮತ್ತೊಂದು ಉದಾಹರಣೆಯಾಗಿದೆ.














