Last Updated:
ಬಂಗಾಳಿ ಚಿತ್ರರಂಗದ ಹಿರಿಯ ನಿರ್ದೇಶಕ (Director) ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಾಜಾ ಸೇನ್ (Raja Sen) ಅವರು 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಭಾನುವಾರ ಕೋಲ್ಕತಾದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ನಿರ್ದೇಶಕರು ಕೊನೆಯುಸಿರೆಳೆದಿದ್ದಾರೆ.
ಬಂಗಾಳಿ ಚಿತ್ರರಂಗದ ಹಿರಿಯ ನಿರ್ದೇಶಕ (Director) ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಾಜಾ ಸೇನ್ (Raja Sen) ಅವರು 71ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಭಾನುವಾರ ಕೋಲ್ಕತಾದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ನಿರ್ದೇಶಕರು ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗಗಳ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಜಾ ಸೇನ್ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜಾ ಸೇನ್ ಅವರ ನಿಧನದಿಂದ ಬಂಗಾಳಿ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗಕ್ಕೂ ತುಂಬಲಾರದ ನಷ್ಟವಾಗಿದೆ.














