Last Updated:
ಬಿಗ್ ಬಾಸ್ ಕನ್ನಡ (Bigg Boss Kannada) ಖ್ಯಾತಿಯ ನಟಿ ದಿವ್ಯಾ ಸುರೇಶ್ (Divya Suresh) ಎದುರಲ್ಲಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಬಿಗ್ ಬಾಸ್ ಕನ್ನಡ (Bigg Boss Kannada) ಖ್ಯಾತಿಯ ನಟಿ ದಿವ್ಯಾ ಸುರೇಶ್ (Divya Suresh) ಎದುರಲ್ಲಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವ್ಯಾಪಕ ಚರ್ಚೆಗೆ ಕಾರಣವಾಗಿದೆ. ತಡರಾತ್ರಿ ತಮ್ಮ ಕಸಿನ್ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಸ್ವತಃ ದಿವ್ಯಾ ಸುರೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಭಾನುವಾರ ರಾತ್ರಿ ಸುಮಾರು 11:30ರ ವೇಳೆಗೆ ದಿವ್ಯಾ ಸುರೇಶ್ ತಮ್ಮ ಕಸಿನ್ ಜೊತೆ ರಸ್ತೆಯಲ್ಲಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಅಲ್ಲಿದ್ದ ಯುವಕನೊಬ್ಬ ನೋಡಿ ಗಮನಹರಿಸಿ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ ಎಂದು ನಟಿ ತಿಳಿಸಿದ್ದಾರೆ.
ಘಟನೆಯಿಂದ ಆತಂಕಗೊಂಡ ದಿವ್ಯಾ ಸುರೇಶ್ ಹಾಗೂ ಅವರ ಕಸಿನ್ ತಕ್ಷಣವೇ ಕಾರಿನೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಆದರೆ ಕಾರಿನೊಳಗೆ ಕುಳಿತ ನಂತರವೂ ಆ ವ್ಯಕ್ತಿ ತನ್ನ ಅಸಭ್ಯ ವರ್ತನೆಯನ್ನು ನಿಲ್ಲಿಸಲಿಲ್ಲ ಎಂದು ನಟಿ ತಿಳಿಸಿದ್ದಾರೆ.
ದಿವ್ಯಾ ಸುರೇಶ್ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಹಾಗೆಯೇ ಸಾವಿರಾರು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಹಲವರು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಮಹಿಳೆಯರ ವಿರುದ್ಧ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇನ್ನೂ ಕೆಲವರು ಇಂತಹ ಘಟನೆಗಳನ್ನು ಧೈರ್ಯವಾಗಿ ಹೇಳಿಕೊಂಡಿರುವುದು ಇತರ ಮಹಿಳೆಯರಿಗೆ ಸಹ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Bangalore [Bangalore],Bangalore,Karnataka













