Last Updated:
ವಿಚ್ಛೇದನ ಮಂಜೂರು ಮಾಡುವುದರ ಜೊತೆಗೆ ನಾಗರತ್ನಗೆ 2 ಕೋಟಿ ರೂಪಾಯಿ ಜೀವನಾಂಶ ಪಾವತಿಸುವಂತೆ ದುನಿಯಾ ವಿಜಯ್ ಗೆ ಹೈಕೋರ್ಟ್ ಸೂಚಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ನಾಗರತ್ನ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಯಾಂಡಲ್‌ವುಡ್‌ನ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನ ದಾಂಪತ್ಯ ಜೀವನಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿದೆ. ಹಲವು ವರ್ಷಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಈ ವೈವಾಹಿಕ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿದೆ. ಇದೇ ವೇಳೆ ನಾಗರತ್ನಗೆ 2 ಕೋಟಿ ರೂಪಾಯಿ ಜೀವನಾಂಶ ನೀಡುವಂತೆ ನಟ ದುನಿಯಾ ವಿಜಯ್ ಗೆ ನ್ಯಾಯಾಲಯ ನಿರ್ದೇಶನ ನೀಡಿದೆ.














