Last Updated:
ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ದಾಖಲಾಗಿದ್ದ ಹಲ್ಲೆ ಆರೋಪದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ.
ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಪುತ್ರ (Duniya Vijay Son) ಸಾಮ್ರಾಟ್ ವಿಜಯ್ (Samrat Vijay) ವಿರುದ್ಧ ದಾಖಲಾಗಿದ್ದ ಹಲ್ಲೆ ಆರೋಪದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಹ ವಿದ್ಯಾರ್ಥಿ ಮನೀಷ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಸಾಮ್ರಾಟ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ಸಾಮ್ರಾಟ್ ವಿಜಯ್ ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಎಸಿಜೆಎಂ 6ನೇ ನ್ಯಾಯಾಲಯದ ಆದೇಶದಿಂದ ರಿಲೀಫ್ ಸಿಕ್ಕಂತಾಗಿದೆ.














