Last Updated:
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ನಟ ದುನಿಯಾ ವಿಜಯ್ (Duniya Vijay) ಪುತ್ರನ ಮೇಲೆ ಎಫ್ಐಆರ್ ದಾಖಲಾಗಿದೆ. ಮನೀಷ್ ಗೌಡ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ (Kengeri Police Station) ದುನಿಯಾ ವಿಜಯ್ ಪುತ್ರ ಸಾಮ್ರಾಟ್ (Samrat) ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಾಮ್ರಾಟ್ ವಿಜಯ್, ಸಮೃದ್ದ್ ಸಿಂಹ, ವಿಶ್ವಾಸ್ ಸುಚಿ, ಸ್ಕಂದ ವೆಂಕಟೇಶ್, ಸಮೀದ್ ವಿರುದ್ಧ ಕೆಂಗೇರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸೆಕ್ಷನ್ 115(2), 118(1), 352, 351(2), 3(5), 137(2) ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.














