Fire Accident: ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ! ಮೂವರು ಸುಟ್ಟು ಕರಕಲು, 8 ಮಂದಿ ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಬೆಂಕಿಯಿಂದ ನೆಲ ಮಹಡಿ, ಮೊದಲ ಮಹಡಿ ಮತ್ತು ಎರಡನೇ ಮಹಡಿ ತೀವ್ರವಾಗಿ ಹಾನಿಗೊಳಗಾಗಿದ್ದು, ಮೂರನೇ, ನಾಲ್ಕನೇ ಮತ್ತು ಐದನೇ ಮಹಡಿಗಳು ಭಾಗಶಃ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

News18
News18

ನವದೆಹಲಿ: ಜನನಿಬಿಡ ಪ್ರದೇಶ ದೆಹಲಿಯ ಮಾಲ್ವಿಯಾ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ ಬೆನ್ನಲ್ಲೇ, ಶುಕ್ರವಾರ ಬೆಳಗಿನ ಜಾವ ಮತ್ತೊಂದು ಅಗ್ನಿ ದುರಂತ (Fire Accident) ಸಂಭವಿಸಿದೆ.

ದೆಹಲಿಯ ತುಘಲಕಾಬಾದ್ ಪ್ರದೇಶದ ಐದು ಅಂತಸ್ತಿನ ವಸತಿ ಕಟ್ಟಡದಲ್ಲಿ ಮತ್ತೊಂದು ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಕಿರಿದಾದ ಲೇನ್‌ನಲ್ಲಿರುವ ಕಟ್ಟಡದಿಂದ ಎಂಟು ಜನರನ್ನು ರಕ್ಷಿಸಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Dog Attack: ಹಾಲು ತರಲು ಹೋದ 8 ವರ್ಷದ ಬಾಲಕಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ಬಲಿ!

ಏಮ್ಸ್ ಟ್ರಾಮಾ ಸೆಂಟರ್‌ನ ಬರ್ನ್ಸ್ ಮತ್ತು ಪ್ಲಾಸ್ಟಿಕ್ ಸರ್ಜರಿ ವಾರ್ಡ್‌ಗೆ ದಾಖಲಾಗಿದ್ದ ಮೂವರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅತ್ತ, ಸಫ್ದರ್ಜಂಗ್ ಆಸ್ಪತ್ರೆಯ ಬರ್ನ್ಸ್ ವಾರ್ಡ್‌ಗೆ ದಾಖಲಾಗಿದ್ದ ಐದು ಜನರಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ, ಇದರ ಜೊತೆಗೆ ಇನ್ನೂ ಮೂವರು ಮಹಿಳೆಯರಿಗೆ ಚಿಕಿತ್ಸೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶುಕ್ರವಾರ ಮುಂಜಾನೆ ದೆಹಲಿಯ ತುಘಲಕಾಬಾದ್ ಪ್ರದೇಶದ ಕಟ್ಟಡವೊಂದರಲ್ಲಿ ಸಂಭವಿಸಿದ ದೊಡ್ಡ ಬೆಂಕಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಸಿಬ್ಬಂದಿ ಇದುವರೆಗೆ ಐದು ಜನರನ್ನು ರಕ್ಷಿಸಿದ್ದಾರೆ’ ಎಂದು ದೆಹಲಿ ಪೊಲೀಸರು ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಿನ ಜಾವ 2:25 ರ ಸುಮಾರಿಗೆ ಅಗ್ನಿಶಾಮಕ ಇಲಾಖೆಗೆ ಬೆಂಕಿಯ ಬಗ್ಗೆ ಮಾಹಿತಿ ಬಂದಿತು. ಎಚ್ಚರಿಕೆಯ ನಂತರ, ಮೂರು ಅಗ್ನಿಶಾಮಕ ವಾಹನಗಳು, ಎರಡು ನೀರಿನ ಬೌಸರ್‌ಗಳು, ಒಂದು ಆಕ್ಸಿಜನ್ ಘಟಕ ಮತ್ತು ಒಂದು ತ್ವರಿತ ಪ್ರತಿಕ್ರಿಯೆ ವಾಹನ (ಕ್ಯೂಆರ್‌ವಿ) ಸ್ಥಳಕ್ಕೆ ದೌಡಾಯಿಸಲಾಯಿತು.

ರಕ್ಷಣಾ ತಂಡಗಳು ಕಟ್ಟಡದಿಂದ ನಿವಾಸಿಗಳನ್ನು ಸ್ಥಳಾಂತರಿಸಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದವು. ಕಟ್ಟಡದೊಳಗೆ ನಿಲ್ಲಿಸಿದ್ದ ವಾಹನಗಳು ಬೆಂಕಿ ತೀವ್ರತೆಗೆ ಸುಟ್ಟು ಕರಕಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಶೀಘ್ರದಲ್ಲೇ ಹೊಗೆ ಇಡೀ ಕಟ್ಟಡವನ್ನು ಆವರಿಸಿತು, ಹಲವಾರು ನಿವಾಸಿಗಳು ಒಳಗೆ ಸಿಲುಕಿಕೊಂಡರು ಎಂದು ಸ್ಥಳೀಯರು ಹೇಳಿದ್ದಾರೆ.

ಕೊನೆಗೂ ಬೆಳಗಿನ ಜಾವ 3:45 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಮತ್ತು ಬೆಳಿಗ್ಗೆ 4 ಗಂಟೆಗೆ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಘೋಷಿಸಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed