Last Updated:
ಬೆಂಗಳೂರಿನಲ್ಲಿ ಅಗ್ನಿ ದುರಂತ ತಡೆಗೆ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಇರುವ ಮೊದಲ ವೈಟ್ ಟ್ಯಾಪಿಂಗ್ ರಸ್ತೆಯನ್ನು ಸಚಿವ ಕೃಷ್ಣ ಬೈರೇಗೌಡ ಉದ್ಘಾಟಿಸಿದರು. ಆರ್.ಟಿ. ಸ್ಟ್ರೀಟ್ ಮತ್ತು ಮಜೆಸ್ಟಿಕ್ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಈ ವ್ಯವಸ್ಥೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತಗಳು ಸಂಭವಿಸಿದಾಗ ತಕ್ಷಣವೇ ನೀರು ಬಳಕೆಗೆ ಭಾರೀ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು (Bengaluru) ಮಹಾನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ಅಗ್ನಿ (Fire) ನಂದಿಸಲು ನೆರವಾಗುವ ವಿನೂತನ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ (Fire Hydrant) ಇರುವ ರಾಜ್ಯದ ಅಥವಾ ನಗರದ ಮೊದಲ ವೈಟ್ ಟ್ಯಾಪಿಂಗ್ ರಸ್ತೆಯನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಅಧಿಕೃತವಾಗಿ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕೇಂದ್ರ ನಗರ ಪಾಲಿಕೆ ಆಯುಕ್ತ ಜಿ. ಜಗದೀಶ್ ಮುಂತಾದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಮಾರು 3,000 ಕೋಟಿ ರೂ. ವೆಚ್ಚದಲ್ಲಿ ನಗರದಲ್ಲಿ 250 ಕಿ.ಮೀ. ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಿಸಲಾಗುತ್ತಿದ್ದು, ಈಗಾಗಲೇ 2ನೇ ಹಂತದ 120 ಕಿ.ಮೀ. ಉದ್ದದ ರಸ್ತೆಗಳ ಪೈಕಿ 60 ಕಿ.ಮೀ. ಮುಗಿದಿದೆ. ಉಳಿದ 60 ಕಿ.ಮೀ. ಕಾಮಗಾರಿಯನ್ನು ಡಿಸೆಂಬರ್‍ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
ಲಕ್ಷ್ಮಣಪುರಿ ಪೊಲೀಸ್ ಠಾಣೆಯಿಂದ ಶಾಂತಲಾ ಜಂಕ್ಷನ್‍ವರೆಗೆ: 10.5 ಮೀಟರ್ ಅಗಲ ಹಾಗೂ 418 ಮೀಟರ್ ರಸ್ತೆಯನ್ನು 8.74 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಶ್ರೀನಿವಾಸ ಮಂದಿರ ರಸ್ತೆಯಿಂದ ಅವ್ನೂ ರಸ್ತೆವರೆಗೆ: 3 ಮೀಟರ್ ಅಗಲ ಹಾಗೂ 645 ಮೀಟರ್ ರಸ್ತೆಯನ್ನು 2.52 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.
Bangalore [Bangalore],Bangalore,Karnataka
Aug 05, 2026 11:42 AM IST














