Last Updated:
ಹೆಂಡತಿ-ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ, ಅವರಿಗೆ ಜೀವನಾಂಶ ಕೊಡದಿದ್ರೆ ಸಂಬಳದಲ್ಲೇ ಹಣ ಕಟ್ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ ಮಹತ್ವದ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಹೆಂಡತಿ-ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದಿದ್ದರೆ, ಅವರಿಗೆ ಜೀವನಾಂಶ (Alimony) ಕೊಡದಿದ್ರೆ ಸಂಬಳದಲ್ಲೇ ಹಣ ಕಟ್ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಹೌದು, ನ್ಯಾಯಾಲಯದ ನಿರ್ದೇಶನವಿದ್ದರೂ ಪತ್ನಿ ಹಾಗೂ ಮಕ್ಕಳಿಗೆ ನೀಡಬೇಕಾದ ಜೀವನಾಂಶವನ್ನು ಪಾವತಿಸದೆ ನಿರ್ಲಕ್ಷ್ಯ ವಹಿಸುವ ಸರ್ಕಾರಿ ನೌಕರರಿಗೆ (Government Employee) ಸರ್ಕಾರ ಶಾಕ್ ಕೊಡಲು ಮುಂದಾಗಿದೆ. ನೌಕರರ ವೇತನದಿಂದಲೇ (Salary) ಹಣವನ್ನು ಕಡಿತಗೊಳಿಸಿ ಫಲಾನುಭವಿಗಳಿಗೆ ವರ್ಗಾಯಿಸುವಂತೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ (CM Mohan Charan Majhi) ಆದೇಶ ಹೊರಡಿಸಿದ್ದಾರೆ.














