Govt Jobs: ಸರ್ಕಾರಿ ಇಲಾಖೆಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ- ಯಾವ ಇಲಾಖೆಗಳಲ್ಲಿ ತಿಳಿಯಿರಿ | Government Departments Have Over 9 Lakh Vacant Posts Reveals Indian Minister

Jobs

oi-Ravindra Gangal

|

Google Oneindia Kannada News

ನವದೆಹಲಿ, ಜುಲೈ 27: ಸರ್ಕಾರಿ ಇಲಾಖೆಗಳಲ್ಲಿ ಒಟ್ಟು 9,64,359 ಹುದ್ದೆಗಳು ಖಾಲಿ ಇವೆ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದರು.

ಆಯವ್ಯಯ ಇಲಾಖೆಯ ವೇತನ ಸಂಶೋಧನಾ ಘಟಕಗಳ ವಾರ್ಷಿಕ ವರದಿಯ ಪ್ರಕಾರ, ಮಾರ್ಚ್ 1, 2022 ಕೊನೆಗೊಂಡಂತೆ ಸರ್ಕಾರಿ ಇಲಾಖೆಗಳಲ್ಲಿ ಒಟ್ಟು 9,64,359 ಖಾಲಿ ಹುದ್ದೆಗಳು ಖಾಲಿ ಇರುವುದು ತಿಳಿದುಬಂದಿದೆ ಎಂದು ಅವರು ಹೇಳಿದರು.

Government Departments Have Over 9 Lakh Vacant Posts Reveals Indian Minister

ತೃಣಮೂಲ ಕಾಂಗ್ರೆಸ್ ಸಂಸದೆ ಮಾಲಾ ರಾಯ್ ಮತ್ತು ಭಾರತ್ ರಾಷ್ಟ್ರ ಸಮಿತಿ ಸಂಸದ ನಾಮ ನಾಗೇಶ್ವರ ರಾವ್ ಅವರು ಕೇಳಿದ ಪ್ರಶ್ನೆಗಳಿಗೆ ಸಚಿವ ಡಾ. ಜಿತೇಂದ್ರ ಸಿಂಗ್ ಉತ್ತರಿಸುತ್ತಿದ್ದರು.

‘ಜೂನ್ 30, 2023 ಕೊನೆಗೊಂಡಂತೆ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ನಿಗಮಗಳು ಮತ್ತು ಇತರ ಸರ್ಕಾರಿ ಏಜೆನ್ಸಿಗಳಲ್ಲಿ ಹುದ್ದೆಗಳು ಖಾಲಿ ಇವೆ. ಸರ್ಕಾರಿ ಇಲಾಖೆಗಳಲ್ಲಿ ಒಟ್ಟು ಖಾಲಿ ಹುದ್ದೆಗಳ ವಿವರಗಳನ್ನು ಲಿಖಿತ ರೂಪದಲ್ಲಿ ನೀಡಲಾಗುವುದು’ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದರು.

Government Departments Have Over 9 Lakh Vacant Posts Reveals Indian Minister

‘ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆಯಾಗಿದೆ. ರೋಜ್‌ಗಾರ್ ಮೇಳದ ಭಾಗವಾಗಿ, ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗನೇ ತುಂಬಲಾಗುವುದು ಎಂದು ತಿಳಿಸಿದರು.

ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು, ರೋಜ್‌ಗಾರ್ ಮೇಳ ಕಾರ್ಯಕ್ರಮಗಳನ್ನು ದೇಶಾದ್ಯಂತ ನಡೆಸಲಾಗುತ್ತದೆ. ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳಿಗೆ ಕಾಲಕಾಲಕ್ಕೆ ನೌಕರಿ ಭರ್ತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು. ಖಾಲಿ ಇರುವ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಮಾಡಲು ನಿರ್ದೇಶಿಸುತ್ತೇವೆ ಎಂದು ಅವರು ಹೇಳಿದರು.

ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು, ಕೇಂದ್ರ ಸಚಿವಾಲಯಗಳು ಹಾಗೂ ಇಲಾಖೆಗಳು, ಕೇಂದ್ರದ ಸಾರ್ವಜನಿಕ ವಲಯದ ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳು ನೇರವಾಗಿ ತುಂಬಲಾಗುವುದು ಎಂದು ಸಚಿವರ ಮಾಹಿತಿ ನೀಡಿದರು.

ನೇಮಕಾತಿ ಏಜೆನ್ಸಿಗಳಾದ ಸ್ಟಾಫ್ ಸೆಲೆಕ್ಷನ್ ಕಮಿಷನ್, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್, ರೈಲ್ವೇ ನೇಮಕಾತಿ ಮಂಡಳಿಗಳು, ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಮೂಲಕ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವ ಡಾ. ಜಿತೇಂದ್ರ ಸಿಂಗ್ ತಿಳಿಸಿದರು.

English summary

According to the Government of India, there are a total of 9,64,359 vacancies in government departments,

Story first published: Thursday, July 27, 2023, 14:19 [IST]

Source link