Last Updated:
ಮಥುರಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೇಮಾ ಮಾಲಿನಿ, ಹನುಮಾನ್ ಅಂಶ್ ಸಿನಿಮಾ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ನೀಮ್ ಕರೋಲಿ ಬಾಬಾ (Neem Karoli Baba) ಅವರ ಜೀವನ ಮತ್ತು ಸರಳತೆಯ ಸಂದೇಶವನ್ನು ಆಧರಿಸಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಸದ್ಯ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಕಡಿಮೆ ಬಜೆಟ್ನಲ್ಲಿ ನಿರ್ಮಾಣಗೊಂಡ ಈ ಚಿತ್ರಕ್ಕೆ ಆರಂಭದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಇರದಿದ್ದರೂ, ಪ್ರೇಕ್ಷಕರ ಬಾಯಿಮಾತಿನ ಪ್ರಚಾರದಿಂದ ಸಿನಿಮಾ ದಿನದಿಂದ ದಿನಕ್ಕೆ ದೊಡ್ಡ ಯಶಸ್ಸಿನತ್ತ ಸಾಗುತ್ತಿದೆ. ಇದೀಗ ಚಿತ್ರದ ಯಶಸ್ಸಿಗೆ ಹಿರಿಯ ನಟಿ ಹಾಗೂ ಮಥುರಾ ಸಂಸದೆ ಹೇಮಾ ಮಾಲಿನಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಸಿನಿಮಾದ ಗೆಲುವನ್ನು ಹನುಮಂತನ ಕೃಪೆಗೆ ಹೋಲಿಸಿದ್ದಾರೆ.














