Last Updated:
ಕೇವಲ 2 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣಗೊಂಡ ಈ ಹಿಂದಿ ಸಿನಿಮಾ ನಿರೀಕ್ಷೆಗೂ ಮೀರಿ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡಿದೆ.
ಆಧ್ಯಾತ್ಮಿಕ ಗುರು ನೀಮ್ ಕರೊಲಿ ಬಾಬಾ (Neem Karoli Baba) ಜೀವನ ಮತ್ತು ಆಧ್ಯಾತ್ಮಿಕ ಪಯಣವನ್ನು ಆಧರಿಸಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೇವಲ 2 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣಗೊಂಡ ಈ ಹಿಂದಿ ಸಿನಿಮಾ ನಿರೀಕ್ಷೆಗೂ ಮೀರಿ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡಿದೆ. ಯಾವುದೇ ದೊಡ್ಡ ಸ್ಟಾರ್ಗಳ ಪ್ರಚಾರವಿಲ್ಲದೆ, ಮುಖ್ಯವಾಗಿ ಪ್ರೇಕ್ಷಕರ ಬಾಯಿ ಮಾತಿನ ಪ್ರಚಾರದಿಂದಲೇ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿರುವುದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ.














