Last Updated:
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ಟಿ 20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ. ನಾಯಕಿಯಾಗಿ ವಿಶ್ವ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur), ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪುರುಷ ಅಥವಾ ಮಹಿಳಾ ಆಟಗಾರ್ತಿ ಇದುವರೆಗೆ ಸಾಧಿಸದ ಮೈಲಿಗಲ್ಲು ಸಾಧಿಸಿದ್ದಾರೆ. ದುಬೈನಲ್ಲಿ ನಡೆದ 2026ರ ಮಹಿಳಾ ಏಷ್ಯಾಕಪ್‌ನ (Women’s Asia Cup 2026) ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ (India vs Pakistan) ವಿರುದ್ಧ ಟಾಸ್ ಮಾಡಲು ಮೈದಾನಕ್ಕಿಳಿಯುತ್ತಿದ್ದಂತೆ ಹರ್ಮನ್‌ಪ್ರೀತ್ ಕೌರ್ 150 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.














