HD Kumaraswamy: ಸಿಎಂ ಕಚೇರಿಗೆ ಹೋದ್ರೆ 30 ಲಕ್ಷ ಕೊಡಿ ಅಂತಾರೆ: ಹೆಚ್‌ ಡಿ ಕುಮಾರಸ್ವಾಮಿ ಹೊಸ ಬಾಂಬ್ | Former CM HD Kumaraswamy Outrage Against Congress Government

Karnataka

oi-Reshma P

|

Google Oneindia Kannada News

ಬೆಂಗಳೂರು, ಜುಲೈ 03: ರಾಜ್ಯ ಕಾಂಗ್ರೆಸ್‌ ಸರ್ಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮುಂದುವರೆಸಿದ್ದು, ಶಾಸಕರ ಶಿಫಾರಸ್ಸು ಪತ್ರವನ್ನು ಸಿಎಂ ಕಚೇರಿಗೆ ತೆಗೆದುಕೊಂಡು ಹೋದ್ರೆ 30 ಲಕ್ಷ ಕೊಡಿ ಎಂದು ಕೇಳಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ ಒಂದೆರೆಡು ವರ್ಷಗಳಲ್ಲಿ ಕಾಂಗ್ರೆಸ್ ನಾಯಕರು ಜಾಗಟೆ ಹೊಡೆದ್ರಲ್ಲಪ್ಪ. ಪೇಸಿಎಂ ಅಂತ ರೋಡ್‌ನಲ್ಲಿ ಪೋಸ್ಟರ್ ಹಾಕಿದ್ರಲ್ಲ ಆಗ ದಾಖಲೆ ಇತ್ತಾ!? ಮಧ್ಯಪ್ರದೇಶದಲ್ಲಿ ಕೂಡ ಅದನ್ನೆ ಎಕ್ಸ್‌ಪೆರಿಮೆಂಟ್ ಮಾಡಲಾಗಿದೆ. ಸಿಎಂ ಕಚೇರಿ ಏನಾಗಿದೆ ಅಂತ ಜಗಜ್ಜಾಹಿರಾಗಿದೆ ಎಂದು ಕಾಂಗ್ರೆಸ್‌ ಸರ್ಕಾರ ವಿರುದ್ದ ಕಿಡಿಕಾರಿದ್ದಾರೆ.

Former CM HD Kumaraswamy Outrage Against Congress Government

ಇನ್ನೂ ಬೆಂಗಳೂರು ಅಭಿವೃದ್ದಿ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ಕುಲಗೆಡಿಸಿದವರು ಯಾರು? ಬೆಂಗಳೂರು ಯಾಕೆ ಈ ಪರಿಸ್ಥಿತಿಗೆ ಬಂತು, ನಿಮ್ಮ ಯೋಗ್ಯತೆಗೆ ಮಾಸ್ಟರ್ ಪ್ಲಾನ್ ಬಿಡುಗಡೆ ಮಾಡಬೇಕಿತ್ತು. ಯಾಕೆ ಬಿಡಿಎ ಇಟ್ಕೊಂಡಿದ್ದೀರಾ? ಬೆಂಗಳೂರನ್ನ ಐದು ಆರು ಡಿವಿಷನ್ ಮಾಡ್ತಾರಂತೆ, ಹೀಗೆ ಮಾಡಿದ್ರೆ ಮಣ್ಣು ಹಾಕಿಕೊಳ್ಳಬೇಕು. ಬೆಂಗಳೂರು ಕೆರೆ ನಾಶ ಮಾಡಿದ್ದಾರೆ
ಬೆಂಗಳೂರು ಕೆರೆ ಉಳಿಸಿಕೊಂಡಿದ್ರೆ ಈ ಪರಿಸ್ಥಿತಿ ಬರುತ್ತಾ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ವಿರೋಧ ಪಕ್ಷದ ನಾಯಕನಾಗಿ ಅಂತ ಹೇಳಲ್ಲ ಸದಸ್ಯನಾಗಿ ಸರ್ಕಾರದ ಲೋಪದೋಷಗಳ ಬಗ್ಗೆ ಟೀಕೆ ಮಾಡುತ್ತೇನೆ. ಕುಮಾರಸ್ವಾಮಿ ಹಿಟ್ ಆಂಡ್ ರನ್ ಮಾಡುವವನಲ್ಲ, ಕುಮಾರಸ್ವಾಮಿ ಮಾತನಾಡಿದ್ರೆ ವಿಚಾರ ಇಲ್ಲದೇ ಮಾತನಾಡಲ್ಲ. ಸದನದಲ್ಲಿ ಮಾತನಾಡುತ್ತೇನೆ, ಬಿಜೆಪಿಗರ ಮೇಲೆ ಅಷ್ಟು ಆರೋಪ ಮಾಡಿದ್ರಲ್ಲ ಒಂದಾದ್ರೂ ದಾಖಲೆ ಕೊಟ್ಡಿದ್ದೀರಾ? ಎಂದು ಕಾಂಗ್ರೆಸ್‌ ಸಚಿವರನ್ನ ಪ್ರಶ್ನಿಸಿದ ಅವರು, ಜೆಡಿಎಸ್ ನವರಿಗೆ ಮಾತನಾಡೋಕೆ ಅವಕಾಶವನ್ನೆ ಕೊಟ್ಟಿಲ್ಲ. ಮಾತುಮಾತಿಗೂ ಬಾವಿಗೆ ಇಳಿಯುತ್ತಿದ್ದರು ಎಂದು ಕಾಂಗ್ರೆಸ್‌ ಸದಸ್ಯರ ವಿರುದ್ದ ವಾಗ್ದಾಳಿ ನಡೆಸಿದರು.

English summary

hd kumaraswamy has made allegations of corruption against congress government

Story first published: Monday, July 3, 2023, 14:39 [IST]

Source link