Heart Attack: ಕ್ಯಾಲಿಫೋರ್ನಿಯಾದಲ್ಲಿ ಹೃದಯಾಘಾತ, 36 ವರ್ಷದ ಭಾರತೀಯ ಟೆಕ್ಕಿ ಸಾವು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಅಮೆರಿಕ ಮತ್ತು ಇತರ ದೇಶಗಳಲ್ಲಿ ವಾಸಿಸುವ ಭಾರತೀಯ ನೊವಾಸಿಗಳು ಆರೋಗ್ಯ ಸಮಸ್ಯೆಗಳು ಅಥವಾ ಇತರ ದುರಂತ ಸಂದರ್ಭಗಳಿಂದಾಗಿ ಹಠಾತ್ತನೆ ಸಾವನ್ನಪ್ಪುವ ದುರಂತ ಘಟನೆಗಳು ಹೆಚ್ಚುತ್ತಿವೆ.

News18
News18

ಬೇಗಂಪೇಟೆ: ಅಮೆರಿಕದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 36 ವರ್ಷದ ಭಾರತೀಯ ವ್ಯಕ್ತಿಯೊಬ್ಬ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಹೃದಯಾಘಾತದಿಂದ (Heart Attack) ಕೊನೆಯುಸಿರೆಳೆದ ಘಟನೆ ವರದಿಯಾಗಿದೆ.

ಸೆಪ್ಟೆಂಬರ್ 9 ರಂದು, ಪವನ್ ಸಾಯಿ ತಮ್ಮ ಮಕ್ಕಳೊಂದಿಗೆ ತಮ್ಮ ಮನೆಯಲ್ಲಿ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುರ್ಚಿಯಲ್ಲಿ ಕುಸಿದು ಬಿದ್ದರು. ಕುಟುಂಬ ಸದಸ್ಯರು ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಹಲವಾರು ಪ್ರಯತ್ನಗಳ ಹೊರತಾಗಿಯೂ ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ.

ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಹಠಾತ್ ನಿಧನವು ಅವರ ಕುಟುಂಬದಲ್ಲಿ ದುಃಖದ ಛಾಯೆ ಮೂಡಿಸಿದೆ. ಸಾಯಿ ಅವರ ಪಾರ್ಥಿವ ಶರೀರವನ್ನು ಸೋಮವಾರ ಹೈದರಾಬಾದ್‌ಗೆ ತರಲಾಯಿತು ಮತ್ತು ಬನ್ಸಿಲಾಲ್‌ಪೇಟೆಯ ಸ್ಮಶಾನದಲ್ಲಿ ಅವರ ಅಂತಿಮ ವಿಧಿಗಳನ್ನು ನೆರವೇರಿಸಲಾಯಿತು.

ಅಮೆರಿಕ ಮತ್ತು ಇತರ ದೇಶಗಳಲ್ಲಿ ವಾಸಿಸುವ ಭಾರತೀಯ ನೊವಾಸಿಗಳು ಆರೋಗ್ಯ ಸಮಸ್ಯೆಗಳು ಅಥವಾ ಇತರ ದುರಂತ ಸಂದರ್ಭಗಳಿಂದಾಗಿ ಹಠಾತ್ತನೆ ಸಾವನ್ನಪ್ಪುವ ದುರಂತ ಘಟನೆಗಳು ಹೆಚ್ಚುತ್ತಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed