Last Updated:
ಪ್ರಸ್ತುತ ದುಲೀಪ್ ಟ್ರೋಫಿ ಫೈನಲ್ನಲ್ಲಿ ಆಡುತ್ತಿರುವ ಕನ್ನಡಿಗ ದೇವದತ್ ಪಡಿಕ್ಕಲ್ ಸ್ಥಾನ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಆಸ್ಟ್ರೇಲಿಯಾ ಎ ವಿರುದ್ಧದ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳಲ್ಲಿ ಪಡಿಕ್ಕಲ್ ಅವರು ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ.
ಪುದುಚೇರಿಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 26 ರವರೆಗೆ ನಡೆಯಲಿರುವ ಆಸ್ಟ್ರೇಲಿಯಾ ಎ ವಿರುದ್ಧದ ಎರಡು ಬಹು-ದಿನಗಳ (Multi-Day) ಮತ್ತು ಮೂರು ಏಕದಿನ (One-Day) ಪಂದ್ಯಗಳ ಸರಣಿಗೆ ಭಾರತ ಎ ತಂಡ ಆತಿಥ್ಯ ವಹಿಸಲು ಸಜ್ಜಾಗಿದೆ. ಈ ಅನಧಿಕೃತ ಪಂದ್ಯಗಳಿಗಾಗಿ ಬಿಸಿಸಿಐ ಭಾರತ ಎ ತಂಡಗಳನ್ನ ಪ್ರಕಟಿಸಲಾಗಿದೆ. ಕನ್ನಡಿಗ ದೇವದತ್ ಪಡಿಕ್ಕಲ್ ಟೆಸ್ಟ್ ತಂಡಕ್ಕೆ ಹಾಗೂ ಗಾಯಕ್ವಾಡ್ ಏಕದಿನ ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದಾರೆ.














