Last Updated:
3ನೇ ಏಕದಿನ ಪಂದ್ಯದಲ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್ ತಂಡ ಪ್ರಸಿದ್ಧ್ ಕೃಷ್ಣ ದಾಳಿಗೆ ತತ್ತರಿಸಿ ಕೇವಲ 218 ರನ್ಗಳಿಗೆ ಆಲೌಟ್ ಆಗಿದೆ. ಅಫ್ಘಾನಿಸ್ತಾನ ತಂಡದ ಪರ ನಾಯಕ ಹಶ್ಮತುಲ್ಲಾ ಶಾಹಿದಿ (102) ಶತಕ ಸಿಡಿಸಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು.
ಚೆನ್ನೈನಲ್ಲಿ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ತೋರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್ ತಂಡ ಪ್ರಸಿದ್ಧ್ ಕೃಷ್ಣ ದಾಳಿಗೆ ತತ್ತರಿಸಿ ಕೇವಲ 218 ರನ್ಗಳಿಗೆ ಆಲೌಟ್ ಆಗಿದೆ. ಅಫ್ಘಾನಿಸ್ತಾನ ತಂಡದ ಪರ ನಾಯಕ ಹಶ್ಮತುಲ್ಲಾ ಶಾಹಿದಿ (102) ಶತಕ ಸಿಡಿಸಿ ತಂಡದ ಮೊತ್ತ 200ರ ಗಡಿ ದಾಟಲು ನೆರವಾದರು. ಅಜ್ಮತುಲ್ಲಾ ಒಮರ್ಜಾಯ್ 50, ಮೊಹಮ್ಮದ್ ನಬಿ 21 ಹಾಗೂ ಇಬ್ರಾಹಿಂ ಜದ್ರಾನ್ 11 ರನ್ಗಳಿಸಿ ಎರಡಂಕಿ ಮೊತ್ತ ದಾಟಿದ ಬ್ಯಾಟರ್ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ಸೀಮಿತವಾದರು. ಕನ್ನಡಿಗ ಪ್ರಸಿದ್ಧ್ ಕೃಷ್ಣ 23ಕ್ಕೆ 5 ವಿಕೆಟ್ ಪಡೆದು ಮಿಂಚಿದರು.













