IND vs AFG: 2ನೇ ಪಂದ್ಯದಲ್ಲೂ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ!ಟೀಮ್ ಇಂಡಿಯಾದಲ್ಲಿ 1 ಬದಲಾವಣೆ, ವೈಭವ್​ಗೆ ಇಂದೂ ನೋ ಚಾನ್ಸ್ | ಕ್ರೀಡಾ ಸುದ್ದಿ | ACTPnews

ಭಾರತ vs ಅಫ್ಘಾನಿಸ್ತಾನ


Last Updated:

ಆಫ್ಘಾನಿಸ್ತಾನ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.

 ಭಾರತ vs ಅಫ್ಘಾನಿಸ್ತಾನ
ಭಾರತ vs ಅಫ್ಘಾನಿಸ್ತಾನ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆಫ್ಘಾನಿಸ್ತಾನ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ಪಂದ್ಯದಲ್ಲೂ ಯುವ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಆಡುವ 11ರ ಬಳಗದಲ್ಲಿ ಅವಕಾಶ ಸಿಕ್ಕಿಲ್ಲ. ಮ್ಯಾನೇಜ್‌ಮೆಂಟ್ ಸಂಜು ಸ್ಯಾಮ್ಸನ್ ಮೇಲಿನ ನಂಬಿಕೆಯನ್ನು ಮುಂದುವರಿಸಿದ್ದು, ಅವರಿಗೆ ಮತ್ತೊಂದು ಅವಕಾಶ ನೀಡಿದೆ. ನಿರೀಕ್ಷೆಯಂತೆ ಭಾರತ ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಗಾಯಾಳು ವರುಣ್ ಚಕ್ರವರ್ತಿ ಬದಲಿಗೆ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್ ಕಣಕ್ಕಿಳಿದಿದ್ದಾರೆ. ಮತ್ತೊಂದೆಡೆ, ಆಫ್ಘಾನಿಸ್ತಾನ ತಂಡದಲ್ಲೂ ಒಂದು ಪ್ರಮುಖ ಬದಲಾವಣೆಯಾಗಿದ್ದು, ವೇಗಿ ಫಜಲ್ಹಕ್ ಫಾರೂಕಿ ಬದಲಿಗೆ ಫಿಟ್ ಆಗಿರುವ ನವೀನ್-ಉಲ್-ಹಕ್ ಆಡುವ ಬಳಗವನ್ನು ಸೇರಿಕೊಂಡಿದ್ದಾರೆ.

ಇದೇ ಸೆಪ್ಟೆಂಬರ್ 13 ರಂದು ದೆಹಲಿಯಲ್ಲಿ ನಡೆದ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು.  ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 156 ರನ್​ಗಳಿಸಿತ್ತು. ಈ ಮೊತ್ತವನ್ನ ಭಾರತ ತಂಡ ಕೇವಲ 13. 4 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪಿತು. ಅಭಿಷೇಕ್ ಶರ್ಮಾ ಕೇವಲ 32 ಎಸೆತಗಳಲ್ಲಿ ತಲಾ 7 ಬೌಂಡರಿ ಹಾಗೂ ಸಿಕ್ಸರ್​ಗಳ ಸಹಿತ 82 ರನ್​ಗಳಿಸಿ ಗೆಲುವಿನ ರೂವಾರಿಯಾಗಿದ್ದರು.

ಹೆಡ್​ ಟು ಹೆಡ್ ದಾಖಲೆ

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಆಫ್ಘಾನಿಸ್ತಾನ ತಂಡಗಳ ನಡುವಿನ ಮುಖಾಮುಖಿ (Head-to-Head) ದಾಖಲೆಗಳಲ್ಲಿ ಟೀಮ್ ಇಂಡಿಯಾ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಆಫ್ಘಾನಿಸ್ತಾನ ತಂಡವು ಇದುವರೆಗೆ ಭಾರತದ ವಿರುದ್ಧ ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿ ಒಂದು ಪಂದ್ಯವನ್ನೂ ಗೆದ್ದಿಲ್ಲ. ಟಿ20ಯಲ್ಲಿ ಎರಡೂ ತಂಡಗಳು 10 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ ಒಂದು ಸೂಪರ್ ಓವರ್ ಪಂದ್ಯ ಸೇರಿದಂತೆ 2 9 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.

ಪ್ಲೇಯಿಂಗ್ ಇಲೆವೆನ್

ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

ಆಫ್ಘಾನಿಸ್ತಾನ ತಂಡ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸೆದಿಖುಲ್ಲಾ ಅಟಲ್, ದಾರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed