ಅಫ್ಘಾನಿಸ್ತಾನ ಸರಣಿಗೆ ಘೋಷಿಸಲಾದ ಭಾರತ ತಂಡದಲ್ಲಿರುವ 11 ಆಟಗಾರರು ಗುಜರಾತ್ ಟೈಟಾನ್ಸ್‌ನವರು ಎಂದು ವಿವರಿಸುವ ಪೋಸ್ಟ್ ಅನ್ನು ಫ್ರಾಂಚೈಸಿ ಸ್ವತಃ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಆಟಗಾರರು ಎರಡೂ ತಂಡಗಳನ್ನು ಪ್ರತಿನಿಧಿಸುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ. ಹೀಗಾಗಿ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಒಳಗಿನ ಮುಂಬೈ ಇಂಡಿಯನ್ಸ್ ಆಟಗಾರರ ಪ್ರಾಬಲ್ಯಕ್ಕೆ ಅಂತ್ಯ ಹಾಡಲಾಗಿದೆ ಎಂಬ ಚರ್ಚೆ ನಡೆಯುತ್ತಿದೆ.
ಟೀಮ್ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ ಕೈಯಲ್ಲಿರುವಾಗ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೆಚ್ಚಾಗಿ ತಂಡದಲ್ಲಿದ್ದರು. ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಸೇರಿದಂತೆ ಇನ್ನೂ ಹಲವು ಆಟಗಾರರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರು. ಈಗ ಶುಭಮನ್ ಗಿಲ್ ನಾಯಕನಾಗಿರುವುದರಿಂದ ಜಿಟಿ ಆಟಗಾರರು ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯುಧ್ವೀರ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಜೂನ್ 6 ರಂದು ಪ್ರಾರಂಭವಾಗಲಿದೆ. ಜೂನ್ 14 ರಂದು ಏಕದಿನ ಸರಣಿ ಶುರುವಾಗಲಿದೆ. ಅಂತಿಮ ಪಂದ್ಯ ಜೂನ್ 20 ರಂದು ನಡೆಯಲಿದೆ.
ಮೊದಲ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಜೂನ್ 17 ರಂದು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ . ಸರಣಿಯ ಮೂರನೇ ಮತ್ತು ಅಂತಿಮ 50 ಓವರ್‌ಗಳ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೆಸ್ಟ್ ತಂಡದಲ್ಲಿ 7 ಜಿಟಿ ಆಟಗಾರರು: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್ ಮತ್ತು ಗುರ್ನೂರ್ ಬ್ರಾರ್.
ಏಕದಿನ ತಂಡದಲ್ಲಿ ಗುಜರಾತ್‌ನ 3 ಆಟಗಾರರು: ಶುಭಮನ್ ಗಿಲ್ (ನಾಯಕ), ವಾಷಿಂಗ್ಟನ್ ಸುಂದರ್ ಮತ್ತು ಗುರ್ನೂರ್ ಬ್ರಾರ್.
ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ದುವ್ ಬ್ರಾರ್, ಹರ್ಷ ದುಬೆ, ಧ್ರುವ್ ಜುರೆಲ್.
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಹರ್ಷ್ ದುಬೆ, ಗುರ್ನೂರ್ ಬ್ರಾರ್.












