ದುಬೆ ಟಿ 20 ತಂಡದ ಪ್ರಮುಖ ಸದಸ್ಯರಾಗಿದ್ದರೂ, ಭಾರತಕ್ಕಾಗಿ ಅವರ ಕೊನೆಯ ಏಕದಿನ ಪಂದ್ಯ ಆಗಸ್ಟ್ 2024 ರಲ್ಲಿ ಆಡಿದ್ದರು. ಆದರೆ ದುಬೆ ಕೇವಲ ಟಿ20ಗಳಿಗೆ ಮಾತ್ರ ಸೀಮಿತರಾಗಿದ್ದರು. ಪಾಂಡ್ಯ ಬದಲಿಗೆ ಏಕದಿನ ತಂಡದಲ್ಲಿ ಅವಕಾಶ ಪಡೆದಿದ್ದ ನಿತೀಶ್ ಕೂಡ ಗಾಯಗೊಂಡಿದ್ದರಿಂದ ಈ ಸ್ಫೋಟಕ ಸಿಎಸ್ಕೆ ಆಟಗಾರನಿಗೆ ಏಕದಿನ ಮಾದರಿಯಲ್ಲಿ ಪುನರಾಗಮನ ಮಾಡುವ ಅವಕಾಶ ಸಿಕ್ಕಿದೆ. ನಿತೀಶ್ ಕುಮಾರ್ ರೆಡ್ಡಿ ಪ್ರಸ್ತುತ ತೊಡೆಯ ಸ್ನಾಯುವಿನ ಗಾಯದಿಂದ ಬಳಲುತ್ತಿದ್ದಾರೆ ಮತ್ತು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಪುನಶ್ಚೇತನ ಪಡೆಯುತ್ತಿದ್ದಾರೆ. ಪರಿಣಾಮವಾಗಿ, ಜುಲೈ 23 ರಿಂದ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಿಂದ ಅವರನ್ನು ಹೊರಗಿಡಲಾಗಿದೆ.
ಶುಬ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಶಿವಂ ದುಬೆ.
ಇನ್ನು ಇದೇ ಸಂದರ್ಭದಲ್ಲಿ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ತಂಡವನ್ನ ಪ್ರಕಟಿಸಿದೆ. ಈ ತಂಡದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಮಾಡಲಾಗಿದೆ. ಆಯ್ಕೆದಾರರು ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟು, ಅವರ ಬದಲಿಗೆ ಪಂಜಾಬ್ ವಿಕೆಟ್ ಕೀಪರ್-ಬ್ಯಾಟರ್ ಪ್ರಭರ್ಸಿಮ್ರನ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ವೈಭವ್ ಸೂರ್ಯವಂಶಿ ಅವರನ್ನು ಸಹ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.
ಪ್ರಸ್ತುತ ಇಂಗ್ಲೆಂಡ್ ಸರಣಿಯಲ್ಲಿ ಆಡುತ್ತಿರುವ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಅವರ ಬದಲಿಗೆ ಅಶೋಕ್ ಶರ್ಮಾ, ಯಶ್ ಠಾಕೂರ್ ಮತ್ತು ಮಯಾಂಕ್ ಯಾದವ್ ತಂಡಕ್ಕೆ ಸೇರ್ಪಡೆಗೊಂಡರೆ, ಫಿನಿಶರ್ ರಿಂಕು ಸಿಂಗ್ ಪುನರಾಗಮನ ಮಾಡಿದ್ದಾರೆ.
ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ (ಉಪನಾಯಕ), ಇಶಾನ್ ಕಿಶನ್ (ವಿಕೆಟ್-ಕೀಪರ್), ಪ್ರಭ್ಸಿಮ್ರನ್ ಸಿಂಗ್ (ವಿಕೆಟ್-ಕೀಪರ್), ಶಿವಂ ದುಬೆ, ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ಹರ್ಷ್ ದುಬೆ, ವರುಣ್ ಚಕ್ರವರ್ತಿ, ವರುಣ್ ಚಕ್ರವರ್ತಿ, ಮಯಾಂಕ್ ಯಾದವ್, ಯಶ್ ಠಾಕೂರ್, ಪ್ರಿನ್ಸ್ ಯಾದವ್












