IND vs ENG 3rd ODI: ಏಕದಿನ ಸರಣಿಯಿಂದ ವಾಷಿಂಗ್ಟನ್ ಸುಂದರ್ ಔಟ್! SRH ಆಲ್ ರೌಂಡರ್​​ಗೆ ಜಾಕ್​​ಪಾಟ್ | ಕ್ರೀಡಾ ಸುದ್ದಿ | ACTPnews

ವಾಷಿಂಗ್ಟನ್ ಸುಂದರ್


Last Updated:

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಯುವ ಸ್ಪಿನ್ ಆಲ್‌ರೌಂಡರ್ ಆಯ್ಕೆಯಾಗಿದ್ದಾರೆ. ವಾಷಿಂಗ್ಟನ್ ಸುಂದರ್ ಬಲಗಾಲಿನ ಸ್ನಾಯುವಿನ ಗಾಯದಿಂದ ಹೊರಬಿದ್ದಿದ್ದಾರೆ.

ವಾಷಿಂಗ್ಟನ್ ಸುಂದರ್
ವಾಷಿಂಗ್ಟನ್ ಸುಂದರ್

ಭಾನುವಾರ ಇಂಗ್ಲೆಂಡ್ (India vs England) ವಿರುದ್ಧದ ಕೊನೆಯ ಏಕದಿನ ಪಂದ್ಯ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ (Washington Sundar) ಗಾಯದ ಕಾರಣದಿಂದ ಹೊರಬಿದ್ದಿದ್ದಾರೆ. ಇದೀಗ ಬಿಸಿಸಿಐ ಅವರ ಸ್ಥಾನಕ್ಕೆ ಬದಲೀ ಆಟಗಾರರನ್ನು ಹೆಸರಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ಆಲ್‌ರೌಂಡರ್ ಹರ್ಷ ದುಬೆ ತಂಡಕ್ಕೆ ಸೇರಿಕೊಂಡಿದ್ದಾರೆ. ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಯುವ ಸ್ಪಿನ್ ಆಲ್‌ರೌಂಡರ್ ಆಯ್ಕೆಯಾಗಿದ್ದಾರೆ. ವಾಷಿಂಗ್ಟನ್ ಸುಂದರ್ ಬಲಗಾಲಿನ ಸ್ನಾಯುವಿನ ಗಾಯದಿಂದ ಹೊರಬಿದ್ದಿದ್ದಾರೆ.

ಅಫ್ಘಾನ್ ವಿರುದ್ಧ ಪದಾರ್ಪಣೆ ಮಾಡಿದ್ದ ದುಬೆ

ಹರ್ಷ ದುಬೆ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈ ಸರಣಿಯಲ್ಲಿ ಅವರು ಎರಡು ಪಂದ್ಯಗಳಲ್ಲಿ 4 ವಿಕೆಟ್‌ಗಳನ್ನು ಕಬಳಿಸಿದ್ದರು. ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯದಿಂದಾಗಿ ಸುಂದರ್ ಬದಲಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತೋರುತ್ತದೆ.

ಸ್ಕ್ಯಾನಿಂಗ್‌ಗೆ ಒಳಗಾಗಲಿರುವ ಸುಂದರ್

ಹರ್ಷ ದುಬೆ ಆಯ್ಕೆ ಕುರಿತು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ. ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಬಲ ತೊಡೆಯ ಸ್ನಾಯುವಿಗೆ ಗಾಯ ಮಾಡಿಕೊಂಡಿದ್ದಾರೆ. ಹಾಗಾಗಿ ಸರಣಿಯ ಕೊನೆಯ ಪಂದ್ಯದಿಂದ ಹೊರಗುಳಿದಿದ್ದಾರೆ. ವಾಷಿಂಗ್ಟನ್ ಸುಂದರ್ ಅವರ ಗಾಯಕ್ಕೆ ಸ್ಕ್ಯಾನಿಂಗ್‌ಗೆ ಒಳಗಾಗಲಿದ್ದಾರೆ ಮತ್ತು ಗಾಯದ ಕುರಿತು ಸ್ಪೆಷಲಿಸ್ಟ್‌ಗಳ ಅಭಿಪ್ರಾಯ ಪಡೆದು ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ದುಬೆಗೆ 3ನೇ ಪಂದ್ಯದಲ್ಲಿ ಚಾನ್ಸ್

ಗುರುವಾರ ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವಾಷಿಂಗ್ಟನ್ ಸುಂದರ್ ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದರು. ಈ ಗಾಯದಿಂದಾಗಿ ವಾಷಿಂಗ್ಟನ್ ಸುಂದರ್‌ಗೆ ಭಾರತ ಬೌಲಿಂಗ್‌ ಮಾಡುವ ವೇಳೆ ಫೀಲ್ಡಿಂಗ್ ಮಾಡಲು ಕೂಡ ಸಾಧ್ಯವಾಗಿರಲಿಲ್ಲ. ಈ ಸರಣಿಯಲ್ಲಿ ಉಭಯ ತಂಡಗಳು ಒಂದೊಂದು ಪಂದ್ಯ ಗೆದ್ದಿದ್ದರಿಂದ ಅಂತಿಮ ಪಂದ್ಯ ಸರಣಿ ನಿರ್ಣಾಯಕವಾಯಿತು. ಹರ್ಷ್ ದುಬೆ ಸೇರ್ಪಡೆಯೊಂದಿಗೆ, ಅಂತಿಮ ಏಕದಿನದಲ್ಲಿ ಸುಂದರ್ ಬದಲಿಗೆ ದುಬೆ ಆಡುವ ಸಾಧ್ಯತೆ ಹೆಚ್ಚಿದೆ. ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಬ್ಯಾಟಿಂಗ್ ಡೆಪ್‌ಗೆ ಆದ್ಯತೆ ನೀಡುತ್ತಿರುವುದರಿಂದ ಕುಲದೀಪ್ ಯಾದವ್ ಹಾಗೂ ರವಿ ಬಿಷ್ಣೋಯ್‌ಗಿಂತಲೂ ಹೆಚ್ಚಿನ ಚಾನ್ಸ್ ದುಬೆಗೆ ಇದೆ.

ಭಾರತ ತಂಡ ಹೀಗಿದೆ

ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಶಿವಂ ದುಬೆ, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಅರ್ಷ್‌ದೀಪ್ ಸಿಂಗ್, ಪ್ರಿನ್ಸ್ ಯಾದವ್, ಹರ್ಷ್ ದುಬೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed