IND vs ENG 3rd ODI: ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್! ರಾಹುಲ್ ಇನ್, ಬುಮ್ರಾ ಔಟ್,ಭಾರತ ತಂಡದಲ್ಲಿ 3 ಬದಲಾವಣೆ | ಕ್ರೀಡಾ ಸುದ್ದಿ | ACTPnews

ಭಾರತ vs ಇಂಗ್ಲೆಂಡ್​


Last Updated:

ಲಂಡನ್ ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಇಂದು ನಡೆಯಲಿದೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.

ಭಾರತ vs ಇಂಗ್ಲೆಂಡ್​
ಭಾರತ vs ಇಂಗ್ಲೆಂಡ್​

ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ಫೈನಲ್ ಪಂದ್ಯ ಇಂದು ನಡೆಯುತ್ತಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಎರಡೂ ತಂಡಗಳು ಪ್ರಮುಖ ಬದಲಾವಣೆಗಳನ್ನು ಮಾಡಿವೆ. ಟೀಮ್ ಇಂಡಿಯಾ ಮೂರು ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ಎಲ್. ರಾಹುಲ್ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಗಾಯಕ್ಕೊಳಗಾಗಿದ್ದ ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ತಂಡದಿಂದ ಹೊರಬಿದ್ದಿದ್ದಾರೆ. ಇವರಿಬ್ಬರ ಬದಲಿಗೆ ಪ್ರಿನ್ಸ್ ಯಾದವ್ ಹಾಗೂ ಅರ್ಷದೀಪ್ ಸಿಂಗ್ ತಂಡಕ್ಕೆ ಮರಳಿದ್ದಾರೆ.

ಈಗಾಗಲೇ 3 ಪಂದ್ಯಗಳಲ್ಲಿ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸುವ ಅವಕಾಶ ಭಾರತಕ್ಕಿದೆ. ಕಳೆದ 22 ವರ್ಷಗಳಿಂದ ಮೆನ್ ಇನ್ ಬ್ಲೂ ತಂಡ ಲಾರ್ಡ್ಸ್ ನಲ್ಲಿ ನಡೆದ ಏಕದಿನ ಪಂದ್ಯವನ್ನೂ ಗೆದ್ದಿಲ್ಲ. ಇಂದಾದರೂ ಆ ದಾಖಲೆ ಮುರಿಯುವುದೇ ಎಂದು ಕಾದುನೋಡಬೇಕಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಭಾರತ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಅರ್ಷ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರ್ರನ್, ವಿಲ್ ಜಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಜೋಶ್ ಟಂಗ್.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed