Last Updated:
ಜಿಂಬಾಬ್ವೆ ವಿರುದ್ಧದ ಕೊನೆಯ ಟಿ20 ಪಂದ್ಯ ಹರಾರೆಯಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಜಿಂಬಾಬ್ವೆ ವಿರುದ್ಧದ ಕೊನೆಯ ಟಿ20 ಪಂದ್ಯ ಹರಾರೆಯಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಕಳೆದ ಪಂದ್ಯದಲ್ಲಿ ತಂಡ ಎರಡು ಬದಲಾವಣೆಗಳನ್ನು ಮಾಡಿದೆ. ಪ್ರಿನ್ಸ್ ಯಾದವ್ ಮತ್ತು ಶಿವಂ ದುಬೆ ಈ ಪಂದ್ಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಅಶೋಕ್ ಶರ್ಮಾ ಮತ್ತು ಸೂರ್ಯಾಂಶ್ ಶೆಡ್ಗೆ ಅವಕಾಶ ಸಿಕ್ಕಿದೆ. ಭಾರತ ತಂಡ ಸತತ ಎರಡು ಪಂದ್ಯಗಳನ್ನು ಗೆದ್ದು ಸರಣಿ ಗೆದ್ದಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಭಾರತ 90 ರನ್ಗಳ ಜಯ ಸಾಧಿಸಿತು.
ಭಾರತ ತಂಡ ಜಿಂಬಾಬ್ವೆ ವಿರುದ್ಧದ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೊದಲ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದರೆ, ಎರಡನೇ ಪಂದ್ಯವನ್ನು 90 ರನ್ ಗಳಿಂದ ಗೆದ್ದುಕೊಂಡಿತು. ಈ ಪಂದ್ಯವನ್ನ ಗೆದ್ದು, ಸರಣಿಯನ್ನ 3-0ಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆ ಇದೆ.
ಭಾರತ ತಂಡದ ವೇಗದ ಬೌಲರ್ ಪ್ರಿನ್ಸ್ ಯಾದವ್ ಎರಡನೇ ಪಂದ್ಯದಲ್ಲಿ ಗಾಯಗೊಂಡಿದ್ದು, ಮೂರನೇ ಪಂದ್ಯದಲ್ಲಿ ಆಡುತ್ತಿಲ್ಲ, ನಾಯಕ ಶ್ರೇಯಸ್ ಅಯ್ಯರ್ ನಿನ್ನೆ ಪಂದ್ಯದ ನಂತರ ಬದಲಾವಣೆಯ ಸುಳಿವುಗಳನ್ನು ನೀಡಿದ್ದರು. ಇದೀಗ ಅವರನ್ನ ಹೊರಗಿಟ್ಟು, ಅಶೋಕ್ ಶರ್ಮಾಗೆ ಚಾನ್ಸ್ ನೀಡಲಾಗಿದೆ.
ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಜಿಂಬಾಬ್ವೆ ತಂಡಗಳ ನಡುವಿನ ಹೆಡ್-ಟು-ಹೆಡ್ (ಮುಖಾಮುಖಿ) ದಾಖಲೆಗಳಲ್ಲಿ ಭಾರತ ತಂಡವು ಸಂಪೂರ್ಣ ಮೇಲುಗೈ ಸಾಧಿಸಿದೆ. ಟಿ20 ಮಾದರಿಯಲ್ಲಿ ಉಭಯ ತಂಡಗಳು 16 ಬಾರಿ ಮುಖಾಮುಖಿಯಾಗಿದ್ದು, ಭಾರತ 13 ಪಂದ್ಯಗಳಲ್ಲಿ ಜಯಗಳಿಸಿದೆ. ಜಿಂಬಾಬ್ವೆ ಕೇವಲ 3 ಪಂದ್ಯಗಳನ್ನು ಗೆಲ್ಲಲಷ್ಟೇ ಶಕ್ತವಾಗಿದೆ.
ಭಾರತ ತಂಡವು ಮೊದಲ ಎರಡು ಪಂದ್ಯಗಳಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ (81 ರನ್) ಮತ್ತು ತಿಲಕ್ ವರ್ಮಾ (60 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ 90 ರನ್ಗಳ ಬೃಹತ್ ಜಯ ದಾಖಲಿಸಿತ್ತು. ಯುವ ಆಟಗಾರ ವೈಭವ್ ಸೂರ್ಯವಂಶಿ ಕೂಡ ಭರವಸೆ ಮೂಡಿಸಿದ್ದಾರೆ. ಹಾಗಾಗಿ ಭಾರತ ಸತತ ಎರಡು ವೈಟ್ವಾಷ್ ಮುಖಭಂಗದ ನಂತರ ಭಾರತ ತಂಡ ಮತ್ತೆ ನಂಬರ್ 1 ಟಿ20 ತಂಡವಾಗಿದ್ದು, ಕಳೆದುಹೋಗಿದ್ದ ಟಿ20 ವೈಭವವವನ್ನ ಮರಳಿ ಪಡೆಯಲಿದೆ.
ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್ (ನಾಯಕ) ಸೂರ್ಯಾಂಶ್ ಶೆಡ್ಗೆ, ರಿಂಕು ಸಿಂಗ್, ರವಿ ಬಿಷ್ಣೋಯ್, ಅಶೋಕ್ ಶರ್ಮಾ, ಯಶ್ ಠಾಕೂರ್, ಮಯಾಂಕ್ ಯಾದವ್
ಜಿಂಬಾಬ್ವೆ: ಸಿಕಂದರ್ ರಜಾ (ನಾಯಕ), ಬ್ರಿಯಾನ್ ಬೆನೆಟ್, ಬೆನ್ ಕರನ್, ಡಿಯೋನ್ ಮೈಯರ್ಸ್, ರಯಾನ್ ಬರ್ಲ್, ವೆಸ್ಲಿ ಮಾಧೆವೆರೆ, ತಡಿವಾನಶೆ ಮರುಮಾನಿ (ವಿಕೆಟ್ ಕೀಪರ್), ಬ್ರಾಡ್ ಇವಾನ್ಸ್, ನ್ಯೂಮನ್ ನ್ಯಾಮೂರಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸ್ಸಿಂಗ್ ಮುಜರಬಾನಿ














