Last Updated:
ಶ್ರೇಯಸ್ ಅಯ್ಯರ್ ನಾಯಕತ್ವದ ಮೊದಲ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ಶುಕ್ರವಾರ ಬೆಲ್ಫಾಸ್ಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನ ಐರ್ಲೆಂಡ್ 34 ರನ್ಗಳ ಅಂತರದಿಂದ ಸೋಲಿಸಿ ಇತಿಹಾಸ ನಿರ್ಮಿಸಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದ ಮೊದಲ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ಶುಕ್ರವಾರ ಬೆಲ್ಫಾಸ್ಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನ ಐರ್ಲೆಂಡ್ 34 ರನ್ಗಳ ಅಂತರದಿಂದ ಸೋಲಿಸಿ ಇತಿಹಾಸ ನಿರ್ಮಿಸಿದೆ. ಐರ್ಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲೇ ಭಾರತದ ವಿರುದ್ಧ ಇದು ಮೊದಲ ಗೆಲುವಾಗಿದೆ. ಕಳೆದ ಎರಡು ದಶಕಗಳಿಂದ ಭಾರತ ತಂಡ ಯಾವುದೇ ಮಾದರಿಯಲ್ಲಿ ಐರ್ಲೆಂಡ್ ವಿರುದ್ಧ ಸೋತಿರಲಿಲ್ಲ. ಆದರೆ ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಹೀನಾಯ ಸೋಲು ಕಾಣುವ ಮೂಲಕ ಭಾರೀ ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್, ಲೋರ್ಕನ್ ಟಕರ್ ಅವರ ಅರ್ಧಶತಕದ ಇನ್ನಿಂಗ್ಸ್ಗೆ 9 ವಿಕೆಟ್ಗಳ ನಷ್ಟಕ್ಕೆ 182 ರನ್ ಗಳಿಸಿತ್ತು. ಆದರೆ ಭಾರತ ತಂಡ 18.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 148 ರನ್ಗಳಿಸಿ ಸೋಲುಕಂಡಿತು.













