Last Updated:
ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 170 ರನ್ಗಳ ಸವಾಲಿನ ಮೊತ್ತ ಕಲೆ ಹಾಕಿತು. 171 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 17 ಓವರ್ಗಳಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 106ಕ್ಕೆ ಆಲೌಟ್ ಆಯಿತು.
ಎಡ್ಜ್ ಬಾಸ್ಟನ್ನಲ್ಲಿ ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ 2026ರ 6ನೇ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 64 ರನ್ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 170 ರನ್ಗಳ ಸವಾಲಿನ ಮೊತ್ತ ಕಲೆ ಹಾಕಿತು. ಉಪನಾಯಕಿ ಸ್ಮೃತಿ ಮಂಧಾನ 68 ರನ್ಗಳಿಸಿ ಟಾಪ್ ಸ್ಕೋರರ್ ಆಗಿದ್ದರು. 171 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಕೇವಲ 17 ಓವರ್ಗಳಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 106ಕ್ಕೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತು. ದೀಪ್ತಿ ಶರ್ಮಾ 5 ವಿಕೆಟ್ ಪಡೆದರೆ, ಶ್ರೀರಣಿ 3 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.
ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ಮಹಿಳಾ ತಂಡ ನಿರೀಕ್ಷಿಸಿದ ಆರಂಭ ಪಡೆಯಲಿಲ್ಲ. ಆರಂಭಿಕರಾದ ಶಫಾಲಿ ವರ್ಮಾ ಸಾದಿಯಾ ಇಕ್ಬಾಲ್ ಎಸೆದ ಇನ್ನಿಂಗ್ಸ್ ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿದರೂ, ಅದೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಔಟ್ ಆದರು. ನಂತರ ಬಂದ ಜೇಮೀಮಾ ರೋಡ್ರಿಗಸ್ 6 ಎಸೆತಗಳಲ್ಲಿ ಕೇವಲ 1 ರನ್ಗಳಿಸಿ ತಸ್ಮಿಯಾ ರುಬಾಬ್ ಬೌಲಿಂಗ್ನಲ್ಲಿ ಪರ್ವೇಜ್ಗೆ ಕ್ಯಾಚ್ ನೀಡಿ ಔಟ್ ಆದರು.
ಈ ಹಂತದಲ್ಲಿ ಒಂದಾದ ಉಪನಾಯಕಿ ಸ್ಮೃತಿ ಮಂಧಾನ ಹಾಗೂ ನಾಯಕಿ ಹರ್ಮನ್ಪ್ರೀತ್ ಕೌರ್ 3ನೇ ವಿಕೆಟ್ ಜೊತೆಯಾಟದಲ್ಲಿ 91 ರನ್ಗಳ ಜೊತೆಯಾಟ ನೀಡಿದರು. ಸ್ಮೃತಿ ಮಂಧಾನ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದರು. 44 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ಗಳ ಸಹಿತ 68 ರನ್ಗಳಿಸಿದರು.
ಮಂಧಾನ ಬೆನ್ನಲ್ಲೆ ಭಾರತ ಸತತ ಎರಡು ವಿಕೆಟ್ ಕಳೆದುಕೊಂಡಿತು. ಭಾರತಿ ಫುಲ್ಮಾಲಿ 3 ಎಸೆತಗಳಲ್ಲಿ 1 ರನ್ಗಳಿಸಿದರು.
Jun 14, 2026 10:35 PM IST













