Last Updated:
ಮಹಿಳಾ ಟಿ20 ಏಷ್ಯಾಕಪ್ 2026ರ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದೆ.
ಯುಎಇನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್ 2026ರ (Women’s Asia Cup 2026) ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ (India Women vs Pakistan Women) ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ 7 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತೀಯ ಬೌಲರ್ಗಳ ಸಂಘಟಿತ ದಾಳಿಗೆ ತತ್ತರಿಸಿದ ಪಾಕಿಸ್ತಾನ ಕೇವಲ 55 ರನ್ಗಳ ಅಲ್ಪ ಮೊತ್ತಕ್ಕೆ ಕುಸಿದು ಮುಖಭಂಗ ಅನುಭವಿಸಿದೆ. ಈ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ 8.4 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪುವ ಮೂಲಕ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿತು.














