Last Updated:
ಗಾಲೆಯಲ್ಲಿ ನಡೆದ ಭಾರತ-ಶ್ರೀಲಂಕಾ ಮೊದಲ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 167 ರನ್ ಹೊಡೆದು, ಎರಡನೇ ಇನ್ನಿಂಗ್ಸ್‌ನಲ್ಲಿ 44 ರನ್ ಗಳಿಸಿದರು. ಈ ಅದ್ಭುತ ಆಟದಿಂದ ಪಡಿಕ್ಕಲ್ಲ ದೊಡ್ಡ ಸಾಧನೆ ಮಾಡಿದ್ದಾರೆ.
ಗಾಲೆ(Galle)ಯಲ್ಲಿ ಶ್ರೀಲಂಕಾ (Sri Lanka) ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತ(India)ದ ಬ್ಯಾಟರ್ ದೇವದತ್ ಪಡಿಕ್ಕಲ್ (Devdutt Padikkal) ಅಬ್ಬರಿಸಿದ್ದಾರೆ. ಲಂಕಾ ನೆಲದಲ್ಲಿ ಪಡಿಕ್ಕಲ್ ಅದ್ಭುತ ಬ್ಯಾಟಿಂಗ್ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 167 ರನ್‌ಗಳ ಕಲೆ ಹಾಕಿ ಭಾರತದ ಇನ್ನಿಂಗ್ಸ್ಗೆ ನೆರವಾಗಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ 44 ರನ್ ಗಳಿಸುವ ಮೂಲಕ ದೊಡ್ಡ ಸಾಧನೆ ಮಾಡಿದ್ದಾರೆ. ಟೀಮ್ ಇಂಡಿಯಾದ ದಿಗ್ಗಜರಾದ ಸಚಿನ್ ತೆಂಡೂಲ್ಕರ್ (Sachin Tendulkar) ಮತ್ತು ಶಿಖರ್ ಧವನ್(Shikhar Dhawan)ರನ್ನು ಮೀರಿ ಪಡಿಕ್ಕಲ್ ಭರ್ಜರಿ ದಾಖಲೆಯನ್ನು ನಿರ್ಮಿಸಿದ್ದಾರೆ.














