Last Updated:
ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 503 ರನ್ಗಳಿಸಿ ಡಿಕ್ಲೇರ್ ಘೋಷಿಸಿಕೊಂಡಿದೆ. ನಂತರ ಬ್ಯಾಟಿಂಗ್ ಆರಂಭಿಸಿರುವ ಶ್ರೀಲಂಕಾ ಆರಂಭಿಕ ಆಘಾತ ಅನುಭವಿಸಿದೆ. ಅತಿಥೇಯ ತಂಡ 3 ಓವರ್ಗಳಲ್ಲಿ ಎರಡು ವಿಕೆಟ್ಗಳನ್ನು ಕಳೆದುಕೊಂಡು 8 ರನ್ಗಳನ್ನು ಗಳಿಸಿದೆ.
ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಗಳಿಸಿತು. ಮೊದಲ ದಿನ ದೇವದತ್ ಪಡಿಕ್ಕಲ್ (117) ಶತಕ ಸಿಡಿಸಿದರೆ, 2ನೇ ದಿನ ಧ್ರುವ್ ಜುರೆಲ್ (177 ಎಸೆತಗಳಲ್ಲಿ 9 ಬೌಂಡರಿಗಳು ಮತ್ತು 2 ಸಿಕ್ಸರ್ಗಳ ಸಹಿತ ಅಜೇಯ 115) ಶತಕ ಸಿಡಿಸಿ ಭಾರತ ಬೃಹತ್ ಮೊತ್ತ ದಾಖಲಿಸಲು ನೆರವಾದರು. ಇವರಿಬ್ಬರ ಶತಕಗಳು ಹಾಗೂ ರಿಷಭ್ ಪಂತ್ ಅರ್ಧಶತಕದ(89 ಎಸೆತಗಳಲ್ಲಿ 63, 6 ಬೌಂಡರಿಗಳು ಮತ್ತು 2 ಸಿಕ್ಸರ್ಗಳು) ನೆರವಿನಿಂದ ಟೀಮ್ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 503/9 ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ.














