Last Updated:
372 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿರುವ ಶ್ರೀಲಂಕಾ ತಂಡ ತನ್ನ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 84 ರನ್ ಗಳಿಸಿದೆ. ಮೊದಲ ಟೆಸ್ಟ್ನ ನಾಲ್ಕನೇ ದಿನದಾಟದ ಮುಕ್ತಾಯದ ವೇಳೆಗೆ ಭಾರತ ತಂಡವು ಗಾಲೆಯಲ್ಲಿ ಐತಿಹಾಸಿಕ ಗೆಲುವಿನ ಸನಿಹದಲ್ಲಿದೆ.
ಶ್ರೀಲಂಕಾ ವಿರುದ್ಧ (India vs Sri Lanka) ಗಾಲೆಯಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನಲ್ಲಿ ಭಾರತ ತಂಡ (Team India) ಸಂಪೂರ್ಣ ಹಿಡಿತ ಸಾಧಿಸಿದೆ. ಭಾರತ ನೀಡಿದ 372 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುತ್ತಿರುವ ಶ್ರೀಲಂಕಾ ತಂಡ, ನಾಲ್ಕನೇ ದಿನದ ಅಂತ್ಯಕ್ಕೆ 84 ರನ್‌ಗಳಿಗೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಕೊನೆಯ ದಿನದ ಆಟ ಬಾಕಿ ಉಳಿದಿದ್ದು, ಟೀಮ್ ಇಂಡಿಯಾ ಗೆಲುವಿನ ಪತಾಕೆ ಹಾರಿಸಲು ಇನ್ನೂ 6 ವಿಕೆಟ್ಗಳು ಬಾಕಿ ಉಳಿದಿವೆ.














