Last Updated:
ಭಾರತೀಯ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿದ ಶ್ರೀಲಂಕಾ 284 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಪ್ರವಾಸಿ ಭಾರತ ತಂಡವು 178 ರನ್‌ಗಳ ಭಾರಿ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದುಕೊಂಡಿದೆ.
ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಂದು ಭಾರತ ತಂಡವು ಭಾರಿ ಮುನ್ನಡೆ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸ್ ಮೊತ್ತ 462 ರನ್‌ಗಳಿಗೆ ಉತ್ತರವಾಗಿ ತನ್ನ ಮೊದಲ ಇನ್ನಿಂಗ್ಸ್ ಆಡಿದ ಶ್ರೀಲಂಕಾ, ಭಾರತೀಯ ಬೌಲರ್‌ಗಳ ಸಂಘಟಿತ ದಾಳಿಗೆ ಸಿಲುಕಿ 284 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಪ್ರವಾಸಿ ಭಾರತ ತಂಡವು 178 ರನ್‌ಗಳ ಭಾರಿ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದುಕೊಂಡಿದೆ.














