Last Updated:
ಶ್ರೀಲಂಕಾ ವಿರುದ್ಧ ಕೊಲಮಬೋದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಧ್ಯಪ್ರದೇಶದ ಅನುಭವಿ ಆಲ್‌ರೌಂಡರ್ ಸಾರಂಶ್ ಜೈನ್ ಭಾರತದ ಪರ ಕಣಕ್ಕಿಳಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ಶ್ರೀಲಂಕಾ (India vs Sri Lanka) ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಧ್ಯಪ್ರದೇಶದ ಅನುಭವಿ ಆಲ್‌ರೌಂಡರ್ ಸಾರಾಂಶ ಜೈನ್ ಭಾರತದ ಪರ ಕಣಕ್ಕಿಳಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ತಮ್ಮ 33ನೇ ವರ್ಷ 145ನೇ ದಿನಗಳಲ್ಲಿ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅವರು, 21ನೇ ಶತಮಾನದಲ್ಲೇ ಭಾರತ ಪರ ಟೆಸ್ಟ್ ಆಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಂದ್ಯದ ಆರಂಭಕ್ಕೂ ಮುನ್ನ ಭಾರತ ತಂಡದ ಹಿರಿಯ ಆಟಗಾರ ರವೀಂದ್ರ ಜಡೇಜಾ ಅವರು ಸಾರಾಂಶ ಜೈನ್ ಅವರಿಗೆ ಭಾರತದ 320ನೇ ಟೆಸ್ಟ್ ಕ್ಯಾಪ್ ನೀಡಿ ತಂಡಕ್ಕೆ ಬರಮಾಡಿಕೊಂಡರು.














