Last Updated:
ಶ್ರೀಲಂಕಾ ಇಲೆವೆನ್ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ತೋರಿದೆ. 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 357 ರನ್ಗಳಿಸಿದೆ.
ಕೊಲಂಬೋದ ಎನ್ಸಿಸಿ (NCC) ಮೈದಾನದಲ್ಲಿ ಶ್ರೀಲಂಕಾ ಇಲೆವೆನ್ ವಿರುದ್ಧ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದ ಎರಡನೇ ದಿನದಾಟದಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ತೋರಿದೆ. ಕನ್ನಡಿಗ ದೇವದತ್ ಪಡಿಕ್ಕಲ್ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 2ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 357 ರನ್ ಗಳಿಸಿದ್ದು, ಕೇವಲ 6 ರನ್ಗಳ ಹಿನ್ನಡೆ ಅನುಭವಿಸಿದೆ. ಪಡಿಕ್ಕಲ್ ಅಜೇಯ 142 ಹಾಗೂ ಗುರ್ನೂರ್ ಬ್ರಾರ್ ಅಜೇಯ 36 ರನ್ ಗಳಿಸಿ ಕ್ರೀಸ್ನಲ್ಲಿದ್ದಾರೆ.














