Last Updated:
India-China Face off: ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ – ಚೀನಾ ದೇಶಗಳ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದೆ. ಇಂದು 3ನೇ ಬಾರಿಗೆ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದೆ.
ನವದೆಹಲಿ (ಜೂ. 30): ಲಡಾಖ್ ಗಡಿಯಲ್ಲಿರುವ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಿಂದ ಚೀನಾ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ಹಳಸಿದೆ. ಸಂಘರ್ಷದಲ್ಲಿ ಭಾರತದ 20 ಯೋಧರು ಸಾವನ್ನಪ್ಪಿದ್ದಾರೆ. ಇದಕ್ಕೆ ಪ್ರತೀಕಾರವೆಂಬಂತೆ ಭಾರತದಲ್ಲಿ ಚೀನಾ ಉತ್ಪನ್ನಗಳನ್ನು ನಿಷೇಧಿಸುವ ಅಭಿಯಾನಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ನಿನ್ನೆ ಸಂಜೆ ಕೇಂದ್ರ ಸರ್ಕಾರ ಚೀನಾದ 59 ಆ್ಯಪ್ಗಳನ್ನು ಬ್ಯಾನ್ ಮಾಡಿದೆ. ಇಂದು ಮೂರನೇ ಬಾರಿಗೆ ಚೀನಾ-ಭಾರತ ನಡುವೆ ಸೇನಾ ಕಮಾಂಡರ್ಗಳ ಮಟ್ಟದ ಮಾತುಕತೆ ನಡೆಯಲಿದೆ.
ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ – ಚೀನಾ ದೇಶಗಳ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದೆ. ಇಂದು ಮೂರನೇ ಬಾರಿಗೆ ಉಭಯ ದೇಶಗಳ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆಯಲಿದೆ. ಲಡಾಖ್ ಗಡಿಯಲ್ಲಿ ಪರಿಸ್ಥಿತಿಯ ಬಗ್ಗೆ ಈ ವೇಳೆ ಚರ್ಚೆ ನಡೆದು, ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಲಡಾಖ್ನ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟನ್ನು ಬಗೆಹರಿಸಲು ಭಾರತ ಮತ್ತು ಚೀನಾ ನಡುವೆ ಇಂದು ಮಾತುಕತೆ ನಡೆಯುವ ಮೊದಲೇ ನಿನ್ನೆ ಟಿಕ್ಟಾಕ್ ಸೇರಿದಂತೆ 59 ಚೀನಾ ಆ್ಯಪ್ಗಳನ್ನು ಭಾರತ ಬ್ಯಾನ್ ಮಾಡಿದೆ. ಚೀನಾದ ಮೊಬೈಲ್ ಆ್ಯಪ್ಗಳಿಂದ ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಗೆ ತೊಡಕಾಗಬಹುದು ಎಂಬ ಕಾರಣಕ್ಕೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. Tik tok, Cam scaner, Share It, Helo, Vigo Video, UC Browser, Club Factory, Mi Video Call-Xiaomi, Viva Video, WeChat ಮತ್ತು UC News ಮುಂತಾದ ಆ್ಯಪ್ಗಳು ಬ್ಯಾನ್ ಆಗಿವೆ.













